ಪಿಒಪಿ ಮೂರ್ತಿ ಮಾರಾಟ ನಿಷೇಧ

mymurti_pop_murti_ganeshotsav-3
Published on

ನ್ಯಾಮತಿ: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುವುದನ್ನು ನಿಷೇಧಿಸಿರುವುದಾಗಿ ಪಪಂ ಮುಖ್ಯಾಧಿಕಾರಿ ಪಿ.ಗಣೇಶ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿಯಯನ್ವಯ ಉಚ್ಚ ನ್ಯಾಯಲಯವು ಆದೇಶಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಯಾವುದೇ ವಿಗ್ರಹ, ಮೂರ್ತಿಗಳನ್ನು ಜಲ ಮೂಲಗಳಿಗೆ ವಿಸರ್ಜಿಸಿರುವುದನ್ನ ಕಟ್ಟುನಿಟ್ಟಾಗಿ ನಿಷೇಧಿಸಿದೆ. ಆದೇಶ ಉಲ್ಲಘಂಗಿಸಿ ಕಾನೂನು ಬಾಹಿರವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳು ನಿಯಮ ಮೀರಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ವ್ಯಕ್ತಿ, ಸಂಸ್ಥೆಯ ಮೇಲೆ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಅನ್ವಯ ಕ್ರಮ ಕೈಗೊಳ್ಳುವುದಾಗಿ ಪತ್ರಿಕೆ ಪ್ರಕಟಣೆಯಲ್ಲಿ ಈಚೆಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net