

ಚಿಕ್ಕೋಡಿ: ತಾಲೂಕಿನ ಬೆಳಕೂಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಚಿಕ್ಕೋಡಿ ವಕೀಲರ ಸಂಘದ ಅಧ್ಯಕ್ಷ ಕಲ್ಮೇಶ ಕಿವಡ ಅವಿರೋಧ ಆಯ್ಕೆಯಾದರು.
ಸಹಕಾರಿಯ ಸಭಾಗೃಹದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಚುನಾವಣೆ ಪ್ರಕ್ರಿಯೆಯಲ್ಲಿ ೫ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಲ್ಮೇಶ ಕಿವಡ ಹಾಗೂ ಉಪಾಧ್ಯಕ್ಷರಾಗಿ ಸಾವಿತ್ರಿ ಸೌಂದಲಗಿ(ಮುತ್ನಾಳೆ) ಆಯ್ಕೆಯಾದರು. ಚುನಾವಣಾಧಿಕಾರಿ ಗೋವಿಂದೆಗೌಡ ಪಾಟೀಲ ಅವಿರೋಧ ಆಯ್ಕೆ ಘೋಷಿಸಿದರು. ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ ಇನ್ಸ್ಪೆಕ್ಟರ್ ಬಸವರಾಜ ಉತ್ತುರೆ, ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್.ಪಾಟೀಲ ಇತರರಿದ್ದರು.