

ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ ಮತ್ತು ಚಳ್ಳಕೆರೆ ನಗರಗಳಲ್ಲಿ ಶನಿವಾರದಿಂದ ಪ್ರಾರಂಭವಾಗಿದ್ದ ಕರ್ನಾಟಕ ಲೋಕಸೇವಾ ಆಯೋಗದ ಗ್ರಾಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಹುದ್ದೆಗಳ ನೇಮಕ್ಕ ಸ್ಪರ್ಧಾತ್ಮಕ ಪರೀಕ್ಷೆ ಭಾನುವಾರ ಮುಕ್ತಾಯಗೊಂಡಿತು. ಈ ಎರಡೂ ನಗರಗಳಲ್ಲಿ 40 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. 14614 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು.
ಎರಡನೇ ದಿನ ಬೆಳಗ್ಗೆ 10ರಿಂದ 11.30ರವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆಗೆ 8201 ಅಭ್ಯರ್ಥಿಗಳು ಹಾಜರಾಗಿದ್ದು, 6413 ಅಭ್ಯರ್ಥಿ ಗಳು ಗೈರಾಗಿದ್ದರು. ಮಧ್ಯಾಹ್ನ 2ರಿಂದ 4ರವರೆಗೆ ಸಾಮಾನ್ಯ ಕನ್ನಡ,ಸಾಮಾನ್ಯ ಇಂಗ್ಲಿಷ್,ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆಗೆ 80 72 ಅಭ್ಯರ್ಥಿಗಳು ಹಾಜರಾಗಿದ್ದು,6542 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.
---