ಪಿಡಿಒ ಮೇಲಿನ ದೈಹಿಕ ಹಲ್ಲೆಗೆ ಖಂಡನೆ

16SIRSI2
Published on

ಶಿರಸಿ: ಕರ್ತವ್ಯನಿರತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ನಡೆಯುತ್ತಿರುವ ದೈಹಿಕ ಹಲ್ಲೆ ವಿರೋಧಿಸಿ ಗ್ರಾಮ ಪಂಚಾಯಿತಿ ನೌಕರರು ಕಪ್ಪುಪಟ್ಟಿ ಧರಿಸಿ ತಾಪಂ ಅಧಿಕಾರಿ ಮೂಲಕ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ಇತ್ತೀಚೆಗೆ ಬದನಗೋಡ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಅಲ್ಲಿಯ ಪಿಡಿಒ ಅವರಿಗೆ ಜೀವ ಬೇದರಿಕೆ ಹಾಕಿರುವ ಕುರಿತು ಬನವಾಸಿ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಎಫ್​ಐಆರ್ ಆಗಿದ್ದರೂ ಆರೋಪಿಯನ್ನು ಇನ್ನೂ ಬಂಧಿಸಿಲ್ಲ. ತಕ್ಷಣ ಆರೋಪಿಯನ್ನು ಬಂಧಿಸಬೇಕು. ಪಿಡಿಒ ಹಾಗೂ ಪಂಚಾಯಿತಿ ಸಿಬ್ಬಂದಿಗೆ ಕಾರ್ಯ ನಿರ್ವಹಿಸಲು ಭಯಮುಕ್ತ ವಾತಾವರಣ ಕಲ್ಪಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ವೇಳೆ ತಾಪಂ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಮ ಮೂರ್ತಿ ಬಿ.ವೈ., ಕಾರ್ಯದರ್ಶಿ ಹರ್ಷಾ ರಾಥೋಡ, ಪಿಡಿಒ ಸಂಘದ ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮಹ್ಮದ ರಿಯಾಜ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net