ಪಿಡಿಒ ವಜಾಕ್ಕೆ ಒತ್ತಾಯಿಸಿ ಹರತಾಳ

CTD KARUNADA VIJYASENE---0004
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.54507923, 0.45364293);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;
Published on

ಚಿತ್ರದುರ್ಗ: ಅಧಿಕಾರ ದುರುಪಯೋಗ, ಕರ್ತವ್ಯಲೋಪವೆಸಗುತ್ತಿರುವ ಭರಮಸಾಗರ ಗ್ರಾಪಂ ಪಿಡಿಒ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಕರುನಾಡ ವಿಜಯಸೇನೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.
ಗುರುವಾರ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಗೆ ಗೌರವ ಕೊಡುವುದಿಲ್ಲ. ಈ ಹಿಂದೆ ಇವರು ಕೆಲಸ ಮಾಡಿದ ಸ್ಥಳಗಳಲ್ಲೂ ಇವರ ವಿರುದ್ಧ ಆರೋಪಗಳು ಕೇಳಿಬಂದಿವೆ ಎಂದು ದೂರಿದರು.
ಇನ್ನೂ ಕೆಲವು ಆರೋಪಗಳ ತನಿಖೆ ನಡೆಯುತ್ತಿದ್ದು, ಸೂಕ್ತ ಕ್ರಮಕ್ಕೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಆದರೂ ಇವರು ಸೇವೆಯಲ್ಲಿ ಮುಂದುವರಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಿಡಿಒ ವಿರುದ್ಧ ಕ್ರಮ ಜರುಗಿಸದಿದ್ದರೆ ಜಿಪಂ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು. ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ವೀಣಾ ಗೌರಣ್ಣ, ಎಸ್.ಗೋಪಿನಾಥ, ಜಿಲ್ಲಾ ಉಪಾಧ್ಯಕ್ಷ ರತ್ನಮ್ಮ, ಅವಿನಾಶ್, ಸಾರ್ ಅಹಮದ್, ಸುರೇಶ್, ಪಿ.ಆರ್.ಹರೀಶ್‌ಕುಮಾರ್, ಪಿ.ಆರ್.ಜಗದೀಶ್ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net