ಪಿಡಿಒಗಳಿಗೆ ರಕ್ಷಣೆ ನೀಡಿ

2-msk-3
Published on

ಮಸ್ಕಿ: ತೋರಣದಿನ್ನಿ ಪಿಡಿಒ ತಿಮ್ಮಣ್ಣ ಮೇಲೆ ಗ್ರಾಪಂ ಸದಸ್ಯೆಯ ಪತಿ ಹಲ್ಲೆ ಮಾಡಿರುವುದು ಖಂಡನೀಯವಾಗಿದ್ದು, ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ತಾಪಂ ಇಒ ಉಮೇಶಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು. ಹಲ್ಲೆ ಬಳಿಕ ಪಿಡಿಒ ಭಯಭೀತರಾಗಿದ್ದು, ಕರ್ತವ್ಯ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರಿ ನೌಕರರು ಸುರಕ್ಷಿತವಾಗಿ ಕರ್ತವ್ಯ ನಿರ್ವಹಿಸಲು ಸಹಾಯಕವಾಗುವಂತೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net