

ಶಿರಸಿ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬ ಲಾಕ್ಡೌನ್ ಆದೇಶ ಉಲ್ಲಂಘಿಸಿ ಕಾರ್ವಿುಕರಿಂದ ಕಾಮಗಾರಿ ಮಾಡಿಸಿದ ಬಗ್ಗೆ ಗ್ರಾಮಸ್ಥರೇ ದೂರು ನೀಡಿದ ಘಟನೆ ಸೋಮವಾರ ತಾಲೂಕಿನ ಜಾನ್ಮನೆಯಲ್ಲಿ ನಡೆದಿದೆ.
ತಾಲೂಕಿನ ಜಾನ್ಮನೆ ಗ್ರಾಮ ಪಂಚಾಯಿತಿ ಅಧಿಕಾರಿ ಕೃಷ್ಣಪ್ಪ ಎಂಬುವವರು ಲಾಕ್ಡೌನ್ ಉಲ್ಲಂಘನೆ ಮಾಡಿ ರಸ್ತೆ ಕಾಮಗಾರಿ ಮಾಡಿಸಿದ್ದಾರೆ. ಜತೆ, ಕಾರ್ವಿುಕರ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸಲು ಅವಕಾಶ ನೀಡದೆ ಕಾಂಕ್ರೀಟ್ ರಸ್ತೆ ಕಾಮಗಾರಿ ಮಾಡಿಸಿದ್ದಾಗಿ ಗ್ರಾಮಸ್ಥರು ದೂರಿದ್ದಾರೆ. ಈ ಕುರಿತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಘಟನೆಯ ಸಂಬಂಧ ಸೂಕ್ತ ಪರಿಶೀಲನೆ ನಡೆಸಿ ಲಾಕ್ಡೌನ್ ಆದೇಶ ಉಲ್ಲಂಘನೆ ಆಗಿದ್ದು ಕಂಡು ಬಂದರೆ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.- ಡಾ. ಈಶ್ವರ ಉಳ್ಳಾಗಡ್ಡಿ- ಉಪವಿಭಾಗಾಧಿಕಾರಿ