ಪಿಯು ಕಾಲೇಜು ತೆರೆಯಲು ಮನವಿ

Janatha
Published on

ಚಿತ್ರದುರ್ಗ: ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಈ ಮೊದಲು ಪಿಯುಸಿ ವಿಜ್ಞಾನ ತರಗತಿ ಪ್ರವೇಶಕ್ಕೆ ಅವಕಾಶವಿತ್ತು. ಆದರೀಗ ಇಲ್ಲ. ಆದ್ದರಿಂದ ಪ್ರತ್ಯೇಕ ಪಿಯು ಕಾಲೇಜು ನಿರ್ಮಿಸಿ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರೊಬ್ಬರು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಲ್ಲಿ ಬುಧವಾರ ಮನವಿ ಸಲ್ಲಿಸಿದರು.

ಬುಧವಾರ ನಡೆದ ಜನತಾ ದರ್ಶನದಲ್ಲಿ ನಗರ ವ್ಯಾಪ್ತಿಯಲ್ಲಿ 2 ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸಕ್ಕೆ ಅವಕಾಶವಿದ್ದರೂ ವಿವಿಧ ಗ್ರಾಮಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಆದ್ದರಿಂದ ಕಾಲೇಜು ಅನಿವಾರ್ಯವಾಗಿದೆ ಎಂದು ಮನವರಿಕೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net