ಪುಟ್ಟಣ್ಣ ಮಾಷ್ಟ್ರು ಕಾದಂಬರಿ ಬಿಡುಗಡೆ

novel release
Published on

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಎರಡನೇ ಕಾದಂಬರಿ ಪುಟ್ಟಣ್ಣ ಮಾಷ್ಟ್ರುನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹಷೇರ್ಂದ್ರ ಕುಮಾರ್ ಮಾತನಾಡಿ, ಸಮಯದ ಸದುಪಯೋಗ ಮಾಡಿ ಇಂತಹ ಉತ್ತಮ ಕೃತಿಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು.

ಕಾದಂಬರಿಕಾರ ಡಾ.ಸುಬ್ರಹ್ಮಣ್ಯ ಭಟ್, ಅವರ ಮಕ್ಕಳಾದ ಅಭಿಗಮ್ಯ ರಾಮ್, ಆಶ್ಮನ್ ಕೃಷ್ಣ ಹಾಗೂ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net