ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ!, ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಿದ ಉಪವಿಭಾಗೀಯ ಅಧಿಕಾರಿ ಗಿರೀಶ್ ನಂದನ್

puttur
ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಹಿನ್ನೆಲೆಯಲ್ಲಿ ಪ್ರಮುಖ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸ್ ಸರ್ಪಕಾವಲು ಮಾಡಲಾಗಿತ್ತು.
Published on

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗದ ತಾಲೂಕಾದ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆಯಿಂದ ಆಕ್ರೋಶಿತರಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಈಮಧ್ಯೆ ಹಲವೆಡೆ ಅಹಿತಕರ ಘಟನೆ ನಡೆದಿರುವ ಬಗ್ಗೆ ಮಾಹಿತಿ ಪಡೆದ ಪುತ್ತೂರು ಉಪವಿಭಾಗೀಯ ಅಧಿಕಾರಿ ಗಿರೀಶ್ ನಂದನ್ ಅವರು ಮುಂಜಾಗ್ರತಾಕ್ರಮವಾಗಿ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net