ಪುತ್ರನ ಪುಣ್ಯಸ್ಮರಣೆ ಕಾರ್ಯದಲ್ಲಿ ಸಿದ್ದರಾಮಯ್ಯ ಭಾಗಿ

16
Published on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ಪುತ್ರ ರಾಕೇಶ್ ಅವರ 7ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮಾಧಿಗೆ ಪೂಜೆ ಸಲ್ಲಿಸಿದರು.
ಬೆಂಗಳೂರಿನಿಂದ ರಸ್ತೆ ಮೂಲಕ ಆಗಮಿಸಿದ ಸಿದ್ದರಾಮಯ್ಯ ಅವರು ಜಯಪುರ ಬಳಿಯ ಟಿ.ಕಾಟೂರು ತೋಟದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕುಟುಂಬಸ್ಥರು, ಆಪ್ತ ವಲಯದವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.
ಸಿದ್ದರಾಮಯ್ಯ ಅವರೊಂದಿಗೆ ಪತ್ನಿ ಪಾರ್ವತಮ್ಮ, ಪುತ್ರ ಡಾ.ಯತೀಂದ್ರ, ರಾಕೇಶ್ ಪತ್ನಿ ಸ್ಮಿತಾ ರಾಕೇಶ್, ಪುತ್ರ ಧವನ್ ರಾಕೇಶ್, ಪುತ್ರಿ ತನ್ಮಯಿ ರಾಕೇಶ್, ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಪೂಜೆ ಸಲ್ಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಕೆ.ಆರ್. ನಗರ ಶಾಸಕ ಡಿ.ರವಿಶಂಕರ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ, ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ವೈದ್ಯ ಡಾ.ಶುಶ್ರುತ್, ಜಿ.ಪಂ. ಮಾಜಿ ಸದಸ್ಯರಾದ ರಾಕೇಶ್ ಪಾಪಣ್ಣ, ಸುಧಾ ಮಹದೇವಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ಸಿಂಡಿಕೇಟ್ ಮಾಜಿ ಸದಸ್ಯ ಮಾರ್ಬಳ್ಳಿ ಕುಮಾರ್, ಮುಖಂಡರಾದ ಉದ್ಬೂರು ಕೃಷ್ಣ, ನಾಡನಹಳ್ಳಿ ರವಿ, ಸಿದ್ದರಾಮನಹುಂಡಿ ಬಸವರಾಜು, ಸಿ.ಎಂ. ಸಿದ್ದರಾಮೇಗೌಡ, ಕೆಂಚಪ್ಪ, ಜೆ.ಜೆ. ಆನಂದ್, ಛಾಯಾ, ಕಮಲ, ಗಡ್ಡಬಸಪ್ಪ ಇತರರ ಇದ್ದರು.

ಅಧಿಕಾರಿಗಳೊಂದಿಗೆ ಸಭೆ:
ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ, ನಗರ ಪೊಲೀಸ್ ಕಮೀಷನರ್ ಬಿ.ರಮೇಶ್ ಬಾನೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಇನ್ನಿತರ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಸಭೆ ನಡೆಸಿ, ಜಿಲ್ಲೆಯ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸುವಂತೆ ನಿರ್ದೇಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net