ಪುನೀತ್ ಕೆರೆಹಳ್ಳಿಗೆ ಬೆದರಿಕೆ ಹಾಕಿದ್ದ ಯುವಕನ ಬಂಧನ

Arrest Kaidhi
Published on

ಮೈಸೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಗೆ ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಉದಯಗಿರಿಯ ನಿವಾಸಿ ಅಕ್ರಮ್ ಖಾನ್ ಬಂಧಿತ ಆರೋಪಿ.

ಈತ ಸಾಮಾಜಿಕ ಜಾಲತಾಣದಲ್ಲಿ ‘ಇದ್ರಿಶ್ ಪಾಷ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇನೆ’ ಎಂದು ಹೇಳುವ ಮೂಲಕ ಪುನೀತ್ ಕೆರೆಹಳ್ಳಿಗೆ ಬೆದರಿಕೆ ಹಾಕಿದ್ದ.

ಅಲ್ಲದೆ, ವಾಟ್ಸ್‌ಆ್ಯಪ್ ಕರೆ ಮಾಡಿ ಬೆದರಿಕೆ ಹಾಕಿದ್ದ. ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದ ಉದಯಗಿರಿ ಠಾಣೆಯ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net