ಪುನೀತ್ ಜನ್ಮದಿನದ ಅಂಗವಾಗಿ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ

ಪುನೀತ್ ಜನ್ಮದಿನದ ಅಂಗವಾಗಿ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ
Published on

ಹಾಸನ : ಕರ್ನಾಟಕ ರತ್ನ ದಿವಂಗತ ಪುನೀತ್ ರಾಜ್ ಕುಮಾರ್ ಜನ್ಮ ದಿನಾಚರಣೆ ಅಂಗವಾಗಿ ನಗರದ ತಣ್ಣೀರು ಹಳ್ಳದ ಗುಡ್ಡೆನಹಳ್ಳಿ ಬಳಿ ಬೃಹತ್ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ ಶುಕ್ರವಾರ ನಡೆಯಿತು.
ನೂರಾರು ಸಂಖ್ಯೆಯ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಜಮಾಯಿಸಿ, ಪುನೀತ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಜೊತೆಗೆ ಗ್ರಾಮದ ಹಿರಿಯ ಮುಖಂಡರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚಿ ನೆಚ್ಚಿನ ನಾಯಕನನ್ನು ಸ್ಮರಿಸಿದರು.
ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಬಳಗ ಗುಡ್ಡೆನಹಳ್ಳಿ ಹಾಗೂ ಅಮ್ಮ ಕಣ್ಣು ಮತ್ತು ರೆಟಿನಾ ಕೇರ್ ಸೆಂಟರ್ ಇವರ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಪುನೀತ್ ಅಭಿಮಾನಿಗಳು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆಗೆ ಒಳಪಟ್ಟರು.
ಈ ಸಂಧರ್ಭದಲ್ಲಿ ಗ್ರಾಮದ ಮುಖಂಡರಾದ ಟಿಡಿ ಪ್ರಕಾಶ್, ರಂಗಸ್ವಾಮಿ, ಜನಾರ್ಧನ, ವಿವೇಕ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net