ಪುರಸಭೆ ಅಧಿಕಾರಿ ಮೇಲೆ ಹಲ್ಲೆಗೆ ಖಂಡನೆ

oppo_2
oppo_2
Published on

ಕಲಬುರಗಿ: ಜೇವರ್ಗಿ ಪುರಸಭೆ ಕಚೇರಿಯಲ್ಲಿ ಕರ್ತವ್ಯನಿರತ ಆರೋಗ್ಯ ನಿರೀP್ಷÀಕರ ಮೇಲೆ ಹ¯್ಲೆ ನಡೆಸಿದ ಘಟನೆ ಖಂಡನೀಯ. ಕೂಡಲೇ ಹ¯್ಲÉ ನಡೆಸಿದ ವ್ಯಕ್ತಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜು ಕಟ್ಟಿಮನಿ ಆಗ್ರಹಿಸಿದರು.

ಮಹೇಶ ರಾಠೋಡ್ ಎಂಬಾತ ಆರೋಗ್ಯ ನಿರೀಕ್ಷಕ ರಾಜಶೇಖರ ಹಿರೇಮಠ ಅವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಇದು ಅಧಿಕಾರಿಗಳ ಮೇಲೆ ನಡೆದ ದೌರ್ಜನ್ಯವಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಖಂಡಿಸಿದರು.

ಸರ್ಕಾರಿ ಅಧಿಕಾರಿ, ಸಿಬ್ಬಂದಿ ತಪ್ಪು ಮಾಡಿದರೆ ಅವರ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ನೀಡಲು ಅವಕಾಶವಿದೆ. ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ. ಆದರೆ ಕಚೇರಿಗೆ ಸಂಬAಧವಿಲ್ಲದ ವ್ಯಕ್ತಿ ಅಧಿಕಾರಿಯ ಮೇಲೆ ಹಲ್ಲೆ, ನಿಂದನೆ, ಮಾನಸಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ. ಇಂತಹ ಕೃತ್ಯಗಳು ಪದೇ ಪದೆ ನಡೆಯುತ್ತಿದ್ದು, ಕೆಲವರು ಇದನ್ನು ಶೋಕಿಯಾಗಿಸಿಕೊಂಡಿದ್ದಾರೆ. ಇಂತಹ ಕೃತ್ಯಗಳಿಗೆ ತಡೆ ನೀಡಬೇಕು ಎಂದು ಆಗ್ರಹಿಸಿದರು.

ನೌಕರರ ಮೇಲೆ ಒತ್ತಡ ಹೇರುವುದು ಸರಿಯಲ್ಲ. ಕೂಡಲೇ ಹಲ್ಲೆ ಮಾಡಿದವರನ್ನು ಬಂಧಿಸಬೇಕು. ಈ ಕುರಿತು ಜೇವರ್ಗಿ ಪುರಸಭೆ ಸಿಬ್ಬಂದಿ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬಾಹ್ಯ ಬೆಂಬಲವಿದೆ ಎಂದು ತಿಳಿಸಿದರು. ಸಂಘದ ಉಪಾಧ್ಯಕ್ಷ ಸುನೀಲ ವಂಟಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net