ಪುರಸಭೆ ಅಧ್ಯಕ್ಷ ಶಿವುನಾಯಕ್ ಅಧಿಕಾರ ಸ್ವೀಕಾರ

15 KRN-4
Published on

ಕೆ.ಆರ್.ನಗರ: ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಿವುನಾಯಕ್ ಬುಧವಾರ ಮುಖ್ಯಾಧಿಕಾರಿ ಬಿ.ವಿ.ವೆಂಕಟೇಶ್ ಅವರಿಂದ ಅಧಿಕಾರ ಸ್ವೀಕರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಶಿವುನಾಯಕ್, ಪಟ್ಟಣದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಸರ್ವ ಸದಸ್ಯರ ಪ್ರೀತಿ, ವಿಶ್ವಾಸ ಹಾಗೂ ಸಲಹೆ ಸೂಚನೆಗಳಿಂದ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧತೆಯಿಂದ ಕಾರ್ಯನಿರ್ವಹಿಸುವೆ. ಕುಡಿಯುವ ನೀರು, ಬೀದಿದೀಪ, ಸ್ವಚ್ಛತೆ, ಶೌಚಗೃಹ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲಾಗುವುದು. ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಕಲ್ಪಿಸಲು ಈಗಾಗಲೇ ಅಮೃತ್ ಯೋಜನೆಯಡಿ 30 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು ಕೂಡಲೇ ಶಾಸಕರೊಂದಿಗೆ ಚರ್ಚಿಸಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಲು ಮುಂದಾಗುತ್ತೇವೆ. ಪಟ್ಟಣವನ್ನು ಕಸಮುಕ್ತ ಪಟ್ಟಣವನ್ನಾಗಿ ಮಾಡಿ ಈ ಬಾರಿ ಕೂಡ ಸ್ವಚ್ಛ ನಗರ ಪ್ರಶಸ್ತಿಗಾಗಿ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದರು.

ಪುರಸಭೆ ಮುಖ್ಯಾಧಿಕಾರಿ ಬಿ.ವಿ.ವೆಂಕಟೇಶ್, ಪುರಸಭಾ ಉಪಾಧ್ಯಕ್ಷೆ ವಸಂತಮ್ಮ ಕೃಷ್ಣೇಗೌಡ, ಸದಸ್ಯರಾದ ಕೋಳಿ ಪ್ರಕಾಶ್, ಮಿಕ್ಸರ್ ಶಂಕರ್, ಶಂಕರ್ ಸ್ವಾಮಿ, ಮಾಜಿ ಸದಸ್ಯ ವಿನಯ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಪುಟ್ಟಸ್ವಾಮಿ, ಆದರ್ಶ, ಧರ್ಮ, ಹಿರಿಯ ಆರೋಗ್ಯ ನಿರೀಕ್ಷಕ ರಾಜೇಂದ್ರ, ವ್ಯವಸ್ಥಾಪಕಿ ಸುಧಾರಾಣಿ, ಲೆಕ್ಕ ಪರಿಶೋಧಕಿ ಸ್ವಪ್ನಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net