ಪುರಸಭೆ ಮುಖ್ಯಾಧಿಕಾರಿ ಹುದ್ದೆ ಹಗ್ಗಜಗ್ಗಾಟಕ್ಕೆ ತೆರೆ

16-GPT-1
Published on

ಗುಂಡ್ಲುಪೇಟೆ: ಪುರಸಭೆ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ ಎರಡನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡುವ ಮೂಲಕ ಕಳೆದ ಮೂರು ದಿನಗಳಿಂದ ನಡೆದಿದ್ದ ಹಗ್ಗ ಜಗ್ಗಾಟಕ್ಕೆ ತೆರೆಬಿದ್ದಿದೆ.

ಒಂದೂವರೆ ವರ್ಷದಿಂದಲೂ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಪಿ.ವಸಂತಕುಮಾರಿ ಅವರನ್ನು ಹತ್ತು ದಿನಗಳ ಹಿಂದೆ ಏಕಾಏಕಿ ಸರ್ಕಾರ ಯಾವುದೇ ಹುದ್ದೆ ತೋರಿಸದೆ ವರ್ಗಾವಣೆ ಮಾಡಿತ್ತು. ಅಲ್ಲದೆ ತೆರವಾದ ಸ್ಥಾನಕ್ಕೆ ಗ್ರೇಡ್ 2 ಅಧಿಕಾರಿಯಾದ ಶರವಣ ಅವರನ್ನು ನೇಮಕ ಮಾಡಲಾಗಿತ್ತು. ತಮಗೆ ಇನ್ನೂ ನಾಲ್ಕು ತಿಂಗಳು ಅವಧಿಯಿದ್ದರೂ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಆಡಳಿತ ನ್ಯಾಮಂಡಳಿ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದರು. ನ್ಯಾಯಾಲಯದ ಆದೇಶವಿದ್ದರೂ ಶರವಣ ಅಧಿಕಾರ ಬಿಟ್ಟುಕೊಡದ ಕಾರಣ ಇಬ್ಬರೂ ಅಧಿಕಾರಿಗಳು ಕಚೇರಿಯಲ್ಲಿ ಕುಳಿತಿದ್ದು ಸದಸ್ಯರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ವಸಂತಕುಮಾರಿ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸುವ ಮೂಲಕ ಹಗ್ಗಜಗ್ಗಾಟಕ್ಕೆ ತೆರೆಬಿದ್ದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net