ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಕೆ.ಕಾಳಯ್ಯ ಅಮಾನತು

ec
Published on


ಮಂಡ್ಯ : ಪ್ರಚಾರದ ಬ್ಯಾನರ್ ಮತ್ತು ಫ್ಲೆಕ್ಸ್ ಅಳವಡಿಸಲು ಅನುಮತಿ ನೀಡಿದ ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಕೆ.ಕಾಳಯ್ಯ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರ ಪಟ್ಟಣ ವ್ಯಾಪ್ತಿಯ ಏಕಗವಾಕ್ಷಿ ಕೇಂದ್ರದ ಸುವಿಧ ತಂತ್ರಾಂಶ ತಂಡದಲ್ಲಿ ಕೆಲಸ ಮಾಡುತ್ತಿರುವ ಕೆ.ಕಾಳಯ್ಯ ಅಮಾನತುಗೊಂಡವರು.


ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಅವರು ನಾಮಪತ್ರ ಸಲ್ಲಿಸುವ ಹಿಂದಿನ ದಿನದಂದು ಸಾರ್ವಜನಿಕವಾಗಿ ಪ್ರಚಾರದ ಬ್ಯಾನರ್ ಮತ್ತು ಫ್ಲೆಕ್ಸ್ ಅಳವಡಿಸಲು ಅನುಮತಿ ನೀಡಿದ್ದರು.

ಅಲ್ಲದೆ ಫ್ಲೆಕ್ಸ್‌ಗಳನ್ನು ಅಳವಡಿಸುವ ಸಂಬಂಧ ತಾಲೂಕು ಚುನಾವಣಾಧಿಕಾರಿ ಕ್ರಮ ವಹಿಸಬೇಕಿದ್ದು, ಹಿರಿಯ ಆರೋಗ್ಯಾಧಿಕಾರಿ ಕಾಳಯ್ಯ ಚುನಾವಣಾಧಿಕಾರಿಗಳ ಗಮನಕ್ಕೆ ತಾರದೆ ಅನುಮತಿ ನೀಡಿದ್ದಾರೆ.

ಕರ್ತವ್ಯ ಲೋಪವೆಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ವರದಿ ಆಧರಿಸಿ ತಕ್ಷಣದಿಂದ ಅಮಾನತಿನಲ್ಲಿಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.


ಅಮಾನತಿನ ಅವಧಿಯಲ್ಲಿ ತಮ್ಮ ಕಚೇರಿ ಮುಖ್ಯಸ್ಥರ ಅನುಮತಿ ಇಲ್ಲದೆ ಕೇಂದ್ರಸ್ಥಾನದಿಂದ ಹೊರ ಹೋಗತಕ್ಕದಲ್ಲ. ಅಮಾನತು ಅವಧಿಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಪ್ರಕಾರ ಜೀವನಾಂಶ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net