ಪುರಸ್ಕರಿಸಿದರೆ ಪ್ರತಿಭಾವಂತರಿಗೆ ಸಿಗುವುದು ಉತ್ತೇಜನ

21 kdr 5 web
Published on

ಕಡೂರು: ಪ್ರತಿಭಾವಂತರನ್ನು ಪುರಸ್ಕರಿಸುವುದರಿಂದ ಅವರಲ್ಲಿನ ಪ್ರತಿಭೆ ಇನ್ನಷ್ಟು ಪ್ರಕಾಶನವಾಗುತ್ತದೆ ಎಂದು ಶಾಸಕ ಬೆಳ್ಳಿಪ್ರಕಾಶ್ ತಿಳಿಸಿದರು. ಪಟ್ಟಣದ ಪಿಕಾರ್ಡ್ ಬ್ಯಾಂಕ್ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಉಪ್ಪಾರ ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಜತೆಗೆ ಸಮಾಜದ ಅಭ್ಯುದಯಕ್ಕಾಗಿ ಸಂಘ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಉಪ್ಪಾರ ಸಮಾಜದ ಅಭಿವೃದ್ಧಿಗೆ ನಾನು ಬೆಂಬಲವಾಗಿರುತ್ತೇನೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ವೈ.ಎಂ.ತಿಪ್ಪೇಶ್ ಮಾತನಾಡಿ, ಸಂಘದ ಮೂಲಕ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇವೆ. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಂಘ ಸದಾ ಕ್ರಿಯಾಶೀಲವಾಗಿದೆ. ಉಪ್ಪಾರ ಸಮಾಜದ ಐತಿಹಾಸಿಕ ಮಹತ್ವವನ್ನು ತೆರೆದಿಡುವ, ಧಾರ್ವಿುಕ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಸಂಘವು ಸಮಾಜದ ಜತೆ ಸದಾ ಹೆಗಲು ಕೊಡುತ್ತದೆ ಎಂದು ಹೇಳಿದರು.

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ 100 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿದುಷಿ ಭೂಮಿಕಾ ಭರತನಾಟ್ಯ ಪ್ರದರ್ಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net