ಪುರಾಣ, ಪ್ರವಚನ ಇಂದಿನ ದಿನಗಳಿಗೆ ಪ್ರಸ್ತುತ

18-08-Shiva-3
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಶ್ರೀ ಶರಣಬಸವೇಶ್ವರ ಪುರಾಣ ಪ್ರವಚನ ಕಾರ್ಯಕ್ರಮಕ್ಕೆ ಶಾಸಕ ಡಾ.ಶಿವರಾಜ ಪಾಟೀಲ್ ಶುಕ್ರವಾರ ಉದ್ಘಾಟಿಸಿದರು. ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಚೇಗುಂಟದ ಕ್ಷೀರಲಿಂಗೇಶ್ವರ ಶರಣರು, ಮಾಜಿ ಶಾಸಕ ಎ.ಪಾಪಾರೆಡ್ಡಿ, ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಭೂಪಾಲ ನಾಡಗೌಡ, ಜಿಲ್ಲಾ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ ಇದ್ದರು.
Published on

ರಾಯಚೂರು: ಇಂದಿನ ಆಧುನಿಕತೆ ಯುಗದಲ್ಲಿ ಜನರಲ್ಲಿ ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರ ಮೂಡಿಸುವ ನಿಟ್ಟಿನಲ್ಲಿ ಪುರಾಣ, ಪ್ರವಚನಗಳನ್ನು ಏರ್ಪಡಿಸುವುದು ಹೆಚ್ಚಿನ ಅಗತ್ಯವಿದೆ ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.
ಸ್ಥಳೀಯ ಕಿಲ್ಲೆ ಬೃಹನ್ಮಠದಲ್ಲಿ ಶ್ರಾವಣಮಾಸ ನಿಮಿತ್ತ ಏರ್ಪಡಿಸಿರುವ ಶ್ರೀ ಶರಣಬಸವೇಶ್ವರ ಪುರಾಣ ಪ್ರವಚನ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ, ಜನರಲ್ಲಿ ಸಂಸ್ಕಾರ ಮರೆಯಾಗುತ್ತಿರುವ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯವಶ್ಯವಾಗಿವೆ ಎಂದರು.
ಯುವಜನರಲ್ಲಿ ಧಾರ್ಮಿಕ ಪರಿಜ್ಞಾನ ಕಡಿಮೆಯಾಗುತ್ತಿದ್ದು, ಎಲ್ಲರೂ ಒತ್ತಡದ ಮಧ್ಯೆ ಕಾರ್ಯನಿರ್ವಹಿಸುತ್ತಿದ್ದಾರೆ. ಪುರಾಣ, ಪ್ರವಚನ ಕೇಳುವುದರಿಂದ ಮಾನಸಿಕ ನೆಮ್ಮದಿ ದೊರೆಯುತ್ತಿದ್ದು, ಜನರಲ್ಲಿಯೂ ಧಾರ್ಮಿಕ ಪ್ರಜ್ಞೆ ಬೆಳೆಯುವಂತಾಗುತ್ತದೆ ಎಂದು ಹೇಳಿದರು.
ಶ್ರೀಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ರತಿವರ್ಷ ಶ್ರಾವಣಮಾಸ ನಿಮಿತ್ತ ಮಠದಲ್ಲಿ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಜನರು ಪ್ರವಚನ ಆಲಿಸುವ ಮೂಲಕ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಚೇಗುಂಟದ ಕ್ಷೀರಲಿಂಗೇಶ್ವರ ಶರಣರು, ಮಾಜಿ ಶಾಸಕ ಎ.ಪಾಪಾರೆಡ್ಡಿ, ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಭೂಪಾಲ ನಾಡಗೌಡ, ಜಿಲ್ಲಾ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ಮುಖಂಡರಾದ ಅಶೋಕ ಪಾಟೀಲ್ ಅತ್ತನೂರು, ರವೀಂದ್ರ ಜಲ್ದಾರ್, ಬಸವರಾಜ ಪಾಟೀಲ್ ದರೂರು, ಶಶಿಕಲಾ ಭೀಮರಾಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net