ಪುರಾಣ ಮತ್ತು ಇತಿಹಾಸವನ್ನು ಸಾರುವ ಯಕ್ಷಗಾನ

12rajesh4
Published on

ಚಾಮರಾಜನಗರ: ಪುರಾಣ ಮತ್ತು ಇತಿಹಾಸಗಳನ್ನು ಆಧರಿಸಿದ ಕಥೆಗಳನ್ನು ಸಾರುವ ಯಕ್ಷಗಾನ, ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದೆ ಎಂದು ಬಿಎಸ್‌ವಿ ಪ್ರತಿಷ್ಠಾನದ ವೆಂಕಟನಾಗಪ್ಪ ಶೆಟ್ಟಿ ತಿಳಿಸಿದರು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶ್ರೀಚಾಮರಾಜೇಶ್ವರಸ್ವಾಮಿ ರಥೋತ್ಸವದ ಅಂಗವಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು, ರಂಗವಾಹಿಸಿ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಮೋಹಿನಿ ಭಸ್ಮಾಸುರ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಜನಪ್ರಿಯ ಜಾನಪದ ಕಲಾ ಪ್ರಕಾರಗಳಲ್ಲಿ ಯಕ್ಷಗಾನವೂ ಒಂದಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಬಹಳ ಪ್ರಸಿದ್ಧಿ ಹೊಂದಿದೆ.ಇದು ಪುರಾಣ ಮತ್ತು ಇತಿಹಾಸಗಳನ್ನು ಆಧರಿಸಿದ ಕಥೆಗಳನ್ನು ಪ್ರದರ್ಶಿಸುತ್ತದೆ. ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದೆ. ಶತ ಶತಮಾನಗಳಿಂದಲೂ ಕರಾವಳಿ ಜನರ ಜೀವನದಲ್ಲಿ ಹಾಸುಹೊಕ್ಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡಮಿ ಮಾಜಿ ಸದಸ್ಯ ಶ್ರೀನಿವಾಸ ಸಾಸ್ತಾನ್, ರಂಗವಾಹಿನಿ ಸಂಸ್ಥೆ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ಡಾ.ರಮೇಶ್ ಉಡುಪ, ಡಾ.ಶಶಿಕಲಾ ಚಂಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ನಂಜುಂಡಯ್ಯ, ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಅರ್ಚಕ ರಾಮಕೃಷ್ಣ ಭಾರಧ್ವಜ, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಖಜಾಂಚಿ ವಿಜಯ ಕುಲಾಲ್, ಕಲೆ ನಟರಾಜು ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net