ಪುರಾಣ ಮಹಾಮಂಗಲೋತ್ಸವ ಗುರುವಾರ

veerabhadreshwar
Published on

ಆಳಂದ: ಧುತ್ತರಗಾಂವ ಗ್ರಾಮದ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡ ಶ್ರೀ ವೀರೇಶ್ವರ ಪುರಾಣ ಮಹಾಮಂಗಲ ಮಹೋತ್ಸವ ಗುರುವಾರ ನೆರವೇರಲಿದೆ.

ಗುರುವಾರ ಬೆಳಗ್ಗೆ 10ಕ್ಕೆ ಶಿವಾನುಭವ ಗೋಷ್ಠಿ ನಡೆಯಲಿದೆ. ಕಾಶಿಯ ಶ್ರೀ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ಕಡಗಂಚಿಯ ಶ್ರೀ ವೀರಭದ್ರ ಶಿವಾಚಾರ್ಯರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಡಗಾದ ಶ್ರೀ ಡಾ.ಮುರುಘರಾಜೇಂದ್ರ ಸ್ವಾಮೀಜಿ ಸಮ್ಮುಖ ವಹಿಸಲಿದ್ದು. ಹಲವು ಪೂಜ್ಯರು ಪಾಲ್ಗೊಳ್ಳಲಿದ್ದಾರೆ.

ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕ ಬಿ.ಆರ್.ಪಾಟೀಲ್, ಮಾಜಿ ಶಾಸಕ ಸುಭಾಷ ಗುತ್ತೇದಾರ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಗುರುಪಾದ ಪೂಜೆ, ಜಂಗಮಾರಾಧನೆ, ಮಧ್ಯಾಹ್ನ 1.30ರಿಂದ ರಾತ್ರಿವರೆಗೆ ಮಹಾಪ್ರಸಾದ ಇರಲಿದೆ. ಶುಕ್ರವಾರ ಬೆಳಗ್ಗೆ 9ರಿಂದ ಸಂಜೆ ಐದುಗಂಟೆವರೆಗೆ ಶ್ರೀ ವೀರೇಶ್ವರ ಪಲ್ಲಕ್ಕಿ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net