ಪುರುಷ ಕಾಣೆ ಸುಳಿವಿಗೆ ಸಹಕರಿಸಲು ಮನವಿ

1737459338077
Published on

ಚಾಮರಾಜನಗರ: ನಗರದ ಬಸವೇಶ್ವರ ಚಿತ್ರಮಂದಿರ ಹಿಂಭಾಗದ ನಿವಾಸಿ ರಂಗ ಎಂಬುವವರು ಕಾಣೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.

42 ವರ್ಷದ ರಂಗ 5.6 ಅಡಿ ಎತ್ತರ, ಕೋಲು ಮುಖ, ಕಪ್ಪು ತಲೆಕೂದಲು ಹೊಂದಿದ್ದು, ಕನ್ನಡ, ತಮಿಳು, ತೆಲುಗು ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಬ್ಲೂ ಜೀನ್ಸ್ ಪ್ಯಾಂಟ್, ಬಿಳಿ ಮತ್ತು ಕಪ್ಪು ಬಣ್ಣದ ಚೆಕ್ಸ್ ಶರ್ಟ್ ಧರಿಸಿದ್ದರು. ಇವರ ಸುಳಿವು ದೊರೆತಲ್ಲಿ ಪಟ್ಟಣ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net