ಪುರುಷರಿಗೆ ಉಚಿತ ಪ್ರಯಾಣದ ಪ್ರಸ್ತಾವನೆ ಇಲ್ಲ

ramalinga-reddy-agencies
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳ ಬಸ್​ಗಳಲ್ಲಿ ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಂವಾದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಅವರನ್ನು ಭೇಟಿ ಮಾಡಿದಾಗ ನಾನು ಈ ಕುರಿತು ವಿಚಾರಿಸುತ್ತೇನೆ ಎಂದರು.

ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಹಿಂದೆ ಕಾಂಗ್ರೆಸ್ ಮುಖಂಡರೇ ಇದ್ದಾರೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಬಿಜೆಪಿ ಅಂದರೆ ಬುರುಡೆ ಜನತಾ ಪಕ್ಷ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದು ಹೇಗೆ ? ದೇಶದಲ್ಲಿ ಕಾಂಗ್ರೆಸ್​ನ 214 ಸೇರಿ ಬೇರೆ ಬೇರೆ ಪಕ್ಷಗಳ 450 ಶಾಸಕರನ್ನು ಖರೀದಿ ಬಿಜೆಪಿಯವರು ಖರೀದಿ ಮಾಡಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net