ಪುಲ್ವಾಮಾ ದಾಳಿಯ ಕರಾಳ ದಿನಾಚರಣೆ

14 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಭಾರತೀಯ ಸೈನಿಕರ ದೇಶಭಕ್ತಿ, ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಬೇಕು. ಸೈನಿಕರು ಮನೆ, ಕುಟುಂಬ ತೊರೆದು ದೇಶದ ಗಡಿಯನ್ನು ಸುರಕ್ಷಿತವಾಗಿ ಇಟ್ಟಿರುವುದರಿಂದ ನಾವಿಂದು ನೆಮ್ಮದಿಯಿಂದ ಬದುಕುತ್ತಿದ್ದೇವೆ.ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಹೇಳಿದರು.
ನಗರದ ಜಿಲ್ಲಾಽಕಾರಿ ಕಚೇರಿ ಆವರಣದಲ್ಲಿರುವ ಕಾರ್ಗಿಲ್ ಸ್ತೂಪದ ಬಳಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕರ್ನಲ್ ಜೆ.ಪಿ. ಮಿಶ್ರಾ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉನ್ನತ ಸಾಧನೆ ಸಾಧ್ಯ ಎಂದರು.
ಸAಘಟಕ ಉದಯ ಯಂಡಿಗೇರಿ, ಪ್ರಕಾಶ ಸಜ್ಜನರ, ರವೀಂದ್ರ ಆಕಳವಾಡಿ, ವೀರೇಶ ಕೆಲಗೇರಿ, ಶಿವು ಅಮಿನಗಡ, ಪಂಡಿತ ಮುಂಜಿ, ಸತೀಶ ತೊರಗಲ್, ವಿಜಯ ಸುಲಾಖೆ, ಆದರ್ಶ ಬಾಲಿಕಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಚ್.ವೈ. ಉಪ್ಪಾರ ಹಾಗೂ ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net