ಚಾಮರಾಜನಗರ: ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ 2024ರ ಜ.1ರಿಂದ ಡಿ.31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳನ್ನು ಆಹ್ವಾನಿಸಿದೆ. ಜನಪದ ಪದ್ಯ 2 ಪ್ರಕಾರಗಳು, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಕೃತಿಗಳನ್ನು ಸಲ್ಲಿಸಬಹುದು.
ಲೇಖಕರು/ ಪ್ರಕಾಶಕರು/ ಸಂಪಾದಕರು ತಮ್ಮ ಒಂದು ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಜೂನ್ 30 ರೊಳಗೆ ತಲುಪುವಂತೆ ಖುದ್ದಾಗಿ, ಅಥವಾ ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಬೇಕಿದೆ. ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 3 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು. ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು/ ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದು ಎಂದು ಕರ್ನಾಟಕ ಜಾನಪದ ಅಕಾಡೆಮಿ ರಿಜಿಸ್ಟ್ರಾರ್ ಎನ್. ನಮ್ರತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.