

ವಿಜಯವಾಣಿ ಸುದ್ದಿಜಾಲ ಧಾರವಾಡ
ಲೋಕಾಯುತ ಪ್ರಕಟಣೆ ವತಿಯಿಂದ ನೈಟ್ ವುಡ್ ಪ್ರಶಸ್ತಿ ಪಡೆದ ಕನ್ನಡಿಗರ ಜೀವನ ಮತ್ತು ಸಾಧನೆ ಕುರಿತು ರಚಿಸಲಾದ ‘ನಮ್ಮ ಸರ್’ದಾರರು ಪುಸ್ತಕ ಬಿಡುಗಡೆ ಸಮಾರಂಭವನ್ನು ಜು. 16ರಂದು ಸಂಜೆ 4.30ಕ್ಕೆ ನಗರದ ವಿದ್ಯಾವರ್ಧಕ ಸಂಘದಲ್ಲಿ ಏರ್ಪಡಿಸಲಾಗಿದೆ ಎಂದು ಲೇಖಕ ಗುರು ಹಿರೇಮಠ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಕುರಿತು ಅಥಣಿ ದೇವದಾಸಿ ವಿಮೋಚನಾ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಬಿ.ಎಲ್. ಪಾಟೀಲ ಮಾತನಾಡಲಿದ್ದಾರೆ. ಸಂಗೀತಗಾರ ಪಂ. ಎಂ. ವೆಂಕಟೇಶಕುಮಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಇಂದಿನ ಯುವ ಪೀಳಿಗೆಗೆ ಹಿರಿಯರ ಚರಿತ್ರೆ ಬಗ್ಗೆ ತಿಳಿಸುವ ಪ್ರಯತ್ನ ಆಗಬೇಕಿದೆ. ಅಲ್ಲದೆ ಪ್ರತಿಯೊಬ್ಬರಿಗೆ ಇತಿಹಾಸದ ಅರಿವು ಇರಬೇಕು. ಈ ಪುಸ್ತಕದ ಮೂಲಕ ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಸದಾಶಿವ ಚೌಶೆಟ್ಟಿ, ಅರವಿಂದ ದೇಶಮುಖ, ಇತರರು ಇದ್ದರು.