

ಚಿತ್ರದುರ್ಗ: ಪ್ರಸಕ್ತ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಗಳ ಪುಸ್ತಕಗಳ ಆಯ್ಕೆಗಾಗಿ 2025 ಜ. 1ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ನೋಂದಣಿ, ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ www.dpl.karnataka.gov.in ನ್ನು ಸಂಪರ್ಕಿಸಬಹುದು. ಅರ್ಜಿಗಳನ್ನು ರಾಜ್ಯ, ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯ ಕಚೇರಿಗಳಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 080-22864990ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.