ಪೂಜ್ಯರ ಬಗ್ಗೆ ಅಪಮಾನಕಾರಿ ಹೇಳಿಕೆಗೆ ಖಂಡನೆ

16 ckm 5 gangadharappa
ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಗಂಗಾಧರಪ್ಪ
Published on

ಚಿಕ್ಕಮಗಳೂರು: ಮಹರಾಷ್ಟçದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಬೀಳೂರಿನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮಹಾರಾಷ್ಟçದ ಕೊಲ್ಲಾಪುರ ಕನ್ನೇರಿ ಮಠದ ಶ್ರೀ ಅದೃಶ ಕಾಡಸಿz್ದೆÃಶ್ವರ ಸ್ವಾಮೀಜಿ ಲಿಂಗಾಯತ ಮಠಾಧೀಶರ ಒಕ್ಕೂಟದ ಪೂಜ್ಯರ ಬಗ್ಗೆ ಅವಮಾನಕಾರಿ, ಮಾನಹಾನಿಕರ ಮತ್ತು ಧರ್ಮದ ಹೆಸರಿನಲ್ಲಿ ವಿಭಜನೆ ಮಾಡಬಹುದಾದ ಶಬ್ದಗಳನ್ನು ಬಳಸಿರುವುದನ್ನು ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟಿçÃಯ ಬಸವದಳ ಮತ್ತು ಬಸವಪರ ಸಂಘನೆಗಳು ತೀವ್ರವಾಗಿ ಖಂಡಿಸುತ್ತವೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಗಂಗಾಧರಪ್ಪ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಂತ ಅವಮಾನಕರ ಶಬ್ಧ ಬಳಸುವುದರೊಂದಿಗೆ ಪ್ರತಿಷ್ಠಿತ ಒಕ್ಕೂಟದ ಮಠಾಧೀಶರನ್ನು ಹೆದರಿಸಿ ಹಿಂಸಾತ್ಮಕ ಹಲ್ಲೆ ಮಾಡುವ ಉz್ದÉÃಶದಿಂದ ಕೀಳುಮಟ್ಟದ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿದರು.

ಶ್ರೀಗಳ ಈ ಹೇಳಿಕೆಯಿಂದ ಲಿಂಗಾಯತ ಮಠಾಧೀಶರು ಮತ್ತು ಸಮಸ್ತ ವಿರಕ್ತ ಮಠಗಳ ಪೀಠಾಧಿಪತಿಗಳಿಗೆ ಅವಮಾನವಾಗಿದೆ. ಈ ಸಂಬAಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ರಾಜ್ಯದಲ್ಲಿ ಲಕ್ಷಾಂತರ ಮಂದಿ ಬಸವಣ್ಣನವರ ಅನುಯಾಯಿಗಳು ಲಿಂಗಾಯತ ಮಠಾಧೀಶರನ್ನು ಗುರುಗಳೆಂದು, ಬಸವಣ್ಣಅವರನ್ನು ಲಿಂಗಾಯತ ಧರ್ಮದ ದರ್ಮಗುರು ಎಂದು ಆರಾಧಿಸುತ್ತಿದ್ದಾರೆ. ವಚನ ಸಾಹಿತ್ಯ ನಮ್ಮ ಗ್ರಂಥವಾಗಿದೆ. ಇಡೀ ಜಗತ್ತೇ ಅವರ ತತ್ವಗಳನ್ನು ನಂಬಿ ಆಚರಿಸುತ್ತಿದ್ದಾರೆ ಎಂದು ಹೇಳಿದರು.

ಕನ್ನೇರಿ ಸ್ವಾಮೀಜಿಗಳು ಬಸವಸಂಸ್ಕೃತಿ ಅಭಿಯಾನದಲ್ಲಿ ಭಾಗವಹಿಸಿದ ಮಠಾಧೀಶರನ್ನು ಕಲಾವಿದರೆಂದು, ಬಸವಸಂಸ್ಕೃತಿ ಅಭಿಯಾನ ನಾಟಕದ ಕಂಪನಿ ಎಂದು ಟೀಕಿಸುವ ಮೂಲಕ ಅವಮಾನಿಸಿದ್ದಾರೆ. ಇದರಿಂದ ಧಾರ್ಮಿಕ ಸಹಿಷ್ಣುತೆಗೆ ಧಕ್ಕೆ ತರುವುದಲ್ಲದೆ ದ್ವೇಷ ಹರಡಲು ಕಾರಣವಾಗಿದೆ. ಈ ಹೇಳಿಕೆಯನ್ನು ವಾಪಾಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ರಾಷ್ಟಿçÃಯ ಬಸವದಳದ ಜಿಲ್ಲಾಧ್ಯಕ್ಷ ಬಾಣೂರು ಚನ್ನಪ್ಪ, ತಾಲೂಕು ಕಾರ್ಯದರ್ಶಿ ಎಂ.ಸಿ.ಚನ್ನೇಗೌಡ, ಜಾಗತಿಕ ಲಿಂಗಾಯತ ಮಹಾಸಭಾ ಕಡೂರು ತಾಲೂಕು ಅಧ್ಯಕ್ಷ ಎಚ್.ಬಿ.ಗಣೇಶ್, ತರೀಕೆರೆ ತಾಲೂಕು ಅಧ್ಯಕ್ಷ ಜಿ.ಚಂದ್ರಶೇಖರ್, ಸಂಚಾಲಕ ವಿ.ಎನ್.ರಾಜಶೇಖರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net