ಪೂರ್ಣಗೊಳಿಸಲು ಕಾಲಮಿತಿ ಸ್ಪಷ್ಟಪಡಿಸಿ

DC Meet
Published on

ಕಲಬುರಗಿ: ಮಹಾನಗರಕ್ಕೆ ೨೪ ಗಂಟೆ ನಿರಂತರ ಕುಡಿಯುವ ನೀರು ಒದಗಿಸುವ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ಶೀಘ್ರ ಸ್ಪಷ್ಟÀ್ಟಪಡಿಸಬೇಕು ಎಂದು ಕಾಮಗಾರಿಯ ಗುತ್ತಿಗೆ ಪಡೆದ ಎಲ್ ಆ್ಯಂಡ್ ಟಿ ಕಂಪನಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಖಡಕ್ ಸೂಚನೆ ನೀಡಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಮಹಾನಗರ ಪಾಲಿಕೆ, ಕೆಯುಐಎಫ್‌ಡಿಸಿ ಹಾಗೂ ಎಲ್ ಆ್ಯಂಡ್ ಟಿ ಕಂಪನಿ ಅಧಿಕಾರಿಗಳೊಂದಿಗೆ ಬುಧವಾರ ನಡೆದ ಸಭೆಯಲ್ಲಿ ತಾಕೀತು ಮಾಡಿದರು.
ನಗರಕ್ಕೆ ೨೪)(೭ ಕುಡಿಯುವ ನೀರು ಪೂರೈಕೆ ಯೋಜನೆಯ ಕಾಮಗಾರಿ ನಿಧಾನಗತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಕಾಮಗಾರಿ ಮುಗಿಯೋದು ಯಾವಾಗ? ಸಾರ್ವಜನಿಕರಿಗೆ ನಿತ್ಯ ನೀರು ಪೂರೈಸುವುದು ಯಾವಾಗ? ಎಂದು ಪ್ರಶ್ನಿಸಿದ ಅವರು, ತಕ್ಷಣ ಕಾಲಮಿತಿ ನಿಗದಿ ಮಾಡಿ ಗುರುವಾರ ಸಂಜೆಯೊಳಗೆ ಸ್ಪಷ್ಟವಾಗಿ ತಿಳಿಸುವಂತೆ ಚೆನೈನಿಂದ ಆಗಮಿಸಿದ ಕಂಪನಿಯ ಹಿರಿಯ ಅಧಿಕಾರಿ ಸುಂದರ್ ರಾಜನ್‌ಗೆ ಸೂಚನೆ ನೀಡಿದರು.
ಕಲಬುರಗಿ ಮಹಾನಗರದ ೫೫ ವಾರ್ಡುಗಳಿಗೆ ಪೈಪ್‌ಲೈನ್ ಅಳವಡಿಸಿ ನೀರು ಸರಬರಾಜು ಮಾಡುವ ಸುಮಾರು ೮೩೭ ಕೋಟಿ ರೂ. ವೆಚ್ಚದ ಕಾಮಗಾರಿ ಆಮೆಗತಿಯಲ್ಲಿ ನಡೆದಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆದ ಸಭೆಯಲ್ಲಿ ಸಚಿವರು-ಶಾಸಕರು ಒಕ್ಕೂರಿಲಿನಿಂದ ಅಸಮಾಧಾನ ಹೊರಹಾಕಿದ್ದಾರೆ. ಇದು ಹೀಗೆ ಸಾಗಿದರೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಎಚ್ಚರಿಕೆ ನೀಡಿದ್ದೂ ಅಲ್ಲದೆ ಕಾಮಗಾರಿಯ ಪ್ರಗತಿ ಕುರಿತು ಪ್ರತಿ ವಾರ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ ಎಂದರು.
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಉಪ ಆಯುಕ್ತ ಆರ್.ಪಿ.ಜಾಧವ, ಪಾಲಿಕೆಯ ಕಾರ್ಯನಿರ್ವಾಹಕ ಅಭಿಯಂತರ ಕೆ.ಎಸ್.ಪಾಟೀಲ, ಶಿವಕುಮಾರ, ಕಂಪನಿಯ ಟೀಮ್ ಲೀಡರ್ ಕುಮಾರಸೇನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net