ಪೂರ್ವ ಶಾಸಕರ ವಿರುದ್ಧ ಬಿಜೆಪಿ ಪ್ರತಿಭಟನೆ

BJP East
Published on

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಧಾನವಾಗಿವೆ, ಸಮರ್ಪಕ ಅಭಿವೃದ್ಧಿಯಾಗುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ವತಿಯಿಂದ ನಗರದ ತಾಲೂಕಾಡಳಿತ ಸೌಧದ ಎದುರು ಸಾಂಕೇತಿಕ ಧರಣಿ ನಡೆಸಲಾಯಿತು.

ಕ್ಷೇತ್ರ ವ್ಯಾಪ್ತಿಯಲ್ಲಿ ಆಮೆ ಗತಿಯಲ್ಲಿ ಕೆಲಸಗಳು ಸಾಗುತ್ತಿವೆ. ಅನೇಕ ಕಾಮಗಾರಿಗಳು ಅಪೂರ್ಣಗೊಂಡಿವೆ. ಈ ಬಗ್ಗೆ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಮನವಿ ಮಾಡಿದ್ದರೂ ಎಚ್ಚೆತ್ತುಕೊಂಡಿಲ್ಲ. ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದರು.

ಕ್ಷೇತ್ರದ ಬಗ್ಗೆ ಶಾಸಕರಿಗೆ ಕಳಕಳಿ ಇಲ್ಲ. ನಾವು ಎತ್ತಿದ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ. ಈ ಬಗ್ಗೆ ಜಾಣ ಮೌನ ವಹಿಸಿದ್ದಾರೆ ಎಂದು ಕ್ಷೇತ್ರದ ಬಿಜೆಪಿ ಅಧ್ಯಕ್ಷ ಪ್ರಭು ನವಲಗುಂದಮಠ ಆರೋಪಿಸಿದರು.

ಮಾಜಿ ಶಾಸಕರಾದ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ಮಹಾನಗರ ಪಾಲಿಕೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಶಿವು ಮೆಣಸಿನಕಾಯಿ, ಪಾಲಿಕೆ ಸದಸ್ಯೆ ರಾಧಾಬಾಯಿ ಸಫಾರೆ, ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಸಜ್ಜನವರ, ಜಗದೀಶ ಬುಳ್ಳಾನವರ, ಎಸ್​ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಬಸವರಾಜ ಅಮ್ಮಿನಬಾವಿ, ಜಿಲ್ಲಾ ಪ್ರಕೋಷ್ಠ ಸಂಚಾಲಕ ಚಂದ್ರಶೇಖರ ಗೋಕಾಕ, ಮಾಜಿ ಮೇಯರ್ ವೆಂಕಟೇಶ ಮೇಸ್ತ್ರಿ, ಡಾ. ಕ್ರಾಂತಿಕಿರಣ, ಸಂತೋಷ ಅರಕೇರಿ, ಪ್ರಕಾಶ ಶೃಂಗೇರಿ, ಮಂಜುನಾಥ ಬಿಜವಾಡ, ಅಣ್ಣಪ್ಪ ಗೋಕಾಕ, ಪ್ರತಿಭಾ ಪವಾರ, ಸುವರ್ಣಾ ಜಂಗಮಗೌಡ್ರ, ಪೂರ್ಣಿಮಾ ಶಿಂಧೆ, ಮಾಧ್ಯಮ ಸಂಚಾಲಕ ಲಕ್ಷೀ ಕಾಂತ ಘೋಡಕೆ, ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.

========

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net