ಪೂರ್ವಭಾವಿ ಸಭೆ 28ರಂದು

dc
Published on

ಬೆಳಗಾವಿ: ಜಿಲ್ಲಾಧಿಕಾರಿ ಕಾರ್ಯಾಲಯದ 2ನೇ ಮಹಡಿಯ ಸಭಾಂಗಣದಲ್ಲಿ ಜು. 28ರಂದು ಸಂಜೆ 4 ಗಂಟೆಗೆ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.

ಆಗಸ್ಟ್​ 15ರಂದು ನಡೆಯುವ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದ ಪೂರ್ವಸಿದ್ಧತೆಗಾಗಿ ಅಧಿಕಾರಿಗಳ ಹಾಗೂ ಅಧಿಕಾರೇತರ, ಗಣ್ಯರ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಸಲಹೆ&ಸೂಚನೆ ನೀಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net