ಪೆನ್‌ಡ್ರೈವ್ ಹಂಚಿಕೆಯ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡ ಜಾಮೀನು ಮಂಜೂರು

ಪೆನ್‌ಡ್ರೈವ್ ಹಂಚಿಕೆಯ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡ ಜಾಮೀನು ಮಂಜೂರು
Published on

ಹಾಸನ: ಸಂಸದ ಪ್ರಜ್ವಲ್‌ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ, ಫೋಟೋಗಳಿರುವ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ.
ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿಶಾಸಕ ಪ್ರೀತಂಗೌಡ ಅವರ ಆಪ್ತರಾದ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡರನ್ನು ಮೇ.12 ರಂದು ಎಸ್‌ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿದ ನಂತರ ನ್ಯಾಯಂಗ ಬಂಧನಕ್ಕೆ ಒಳಗಾಗಿದ್ದರು.
ಹದಿನೆಂಟು ದಿನಗಳ ಬಳಿಕ ಜಾಮೀನು ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಸದ್ಯ ಹಾಸನದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಚೇತನ್ ಹಾಗೂ ಲಿಖಿತ್‌ಗೌಡ ಇದ್ದು ಗುರುವಾರ ಸಂಜೆ ಇಬ್ಬರು ಜೈಲಿನಿಂದ ಬಿಡುಗಡೆ ಮಾಡಲಾಯಿತು. ಇಬ್ಬರು ಆರೋಪಿಗಳ ಪರ ವಕೀಲ ಹರೀಶ್ ಬಾಬು ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net