ಪೇದೆ ಹುದ್ದೆಯ ವಯೋಮಿತಿ ಹೆಚ್ಚಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

mysore
Published on

ಮೈಸೂರು: ಪೊಲೀಸ್ ಪೇದೆ ಹುದ್ದೆಯ ವಯೋಮಿತಿ ಹೆಚ್ಚಿಸಿ, ನಿರುದ್ಯೋಗ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

ನಗರದ ಬನ್ನೂರು ರಸ್ತೆಯಲ್ಲಿರುವ ಮಹದೇಶ್ವರ ದೇವಸ್ಥಾನ ಬಳಿಯಿಂದ ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ತೆರಳಿ ಮನವಿ ಸಲ್ಲಿಸಲಾಯಿತು.

ಭಾರತ ಒಕ್ಕೂಟದ ವ್ಯವಸ್ಥೆಯಲ್ಲಿ ಅನೇಕ ರಾಜ್ಯಗಳಲ್ಲಿ ಪೊಲೀಸ್ ಪೇದೆ ವಯೋಮಿತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಸಾಮಾನ್ಯ ವರ್ಗ ಆಯಾ ವರ್ಗಗಳಿಗೆ ಒಂದೊಂದು ವಯೋಮಿತಿ ನಿಗದಿಪಡಿಸಲಾಗಿದೆ. 30 ರಿಂದ 35 ವರ್ಷದ ಮೇಲೆ ಎಲ್ಲ ರಾಜ್ಯಗಳಲ್ಲೂ ವಯೋಮಿತಿ ಇದೆ. ನಮ್ಮ ರಾಜ್ಯದಲ್ಲಿ 27 ವರ್ಷಗಳು ಮಾತ್ರ ಇದೆ. ಈ ವಯೋಮಿತಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಪೊಲೀಸ್ ಪೇದೆ ಹುದ್ದೆಗೆ ಎಸ್‌ಸಿ-ಎಸ್‌ಟಿ, ಒಬಿಸಿಗೆ 33 ವರ್ಷ ಹಾಗೂ ಸಾಮಾನ್ಯ ವರ್ಗಕ್ಕೆ 30 ವರ್ಷ ವಯೋಮಿತಿ ನಿಗದಿಪಡಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಕರವೇ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net