ಪೊನ್ನಂಪೇಟೆ ತಾಲೂಕು ಕಚೇರಿಗೆ ಡಿಸಿ ಭೇಟಿ

Published on

ಗೋಣಿಕೊಪ್ಪ: ಪೊನ್ನಂಪೇಟೆ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ವೆಂಕಟರಾಜು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.


ಹೊಸದಾಗಿ ಪೊನ್ನಂಪೇಟೆ ತಾಲೂಕು ರಚನೆಯಾಗಿದ್ದು, ಸಾರ್ವಜನಿಕರಿಗೆ ತಾಲೂಕು ಕಚೇರಿಯಲ್ಲಿ ಒದಗಿಸಬೇಕಾದ ಸೇವೆಗಳ ವಿಚಾರ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಿದರು.


ಹಾಡಿಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನಾಂಗದವರ ಸಮಸ್ಯೆಗಳನ್ನು ಬಗೆಹರಿಸುವ ವಿಚಾರದಲ್ಲಿ ಮಾಹಿತಿ ಪಡೆದು ಮತ್ತು ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತಿಳಿವಳಿಕೆ ನೀಡಿದರು.


ಅರಣ್ಯದಲ್ಲಿ ಮಾನವ ಮತ್ತು ಪ್ರಾಣಿಗಳ ಸಂಘರ್ಷ ಕುರಿತು ಮಾಹಿತಿ ಪಡೆದರಲ್ಲದೆ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಚರ್ಚಿಸಿದರು. ಬಳಿಕ ಪೊನ್ನಂಪೇಟೆ ಪ್ರವಾಸಿ ಮಂದಿರ ಮತ್ತು ಪೊನ್ನಂಪೇಟೆ ಹಾಕಿ ಕ್ರೀಡಾಂಗಣವನ್ನು ಪರಿಶೀಲಿಸಿದರು. ತಹಸೀಲ್ದಾರ್ ಎನ್.ಎಸ್. ಪ್ರಶಾಂತ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net