

ಚಿತ್ರದುರ್ಗ: ದೈಹಿಕ ಸದೃಢತೆಯೊಂದಿಗೆ ಮಾನಸಿಕ ಆರೋಗ್ಯಕ್ಕೂ ಹೆಚ್ಚಿನ ಆದ್ಯತೆ ನೀಡಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದ ಸ್ಯ ಕಾರ‌್ಯದರ್ಶಿ ಎಂ.ವಿಜಯ್ ಪೊಲೀಸರಿಗೆ ಸಲಹೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಆಶ್ರಯದಲ್ಲಿ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಮತ್ತು ಮಾನಸಿಕ ಯೋಗಕ್ಷೇಮ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಠಾಣೆಗಳಿಗೆ ವಿವಿಧ ಬಗೆಯ ಮನಸ್ಥಿತಿಯ ಜನರ ಬರುತ್ತಾರೆ. ಮಾನಸಿಕ ಸಮತೋಲನ ಇಲ್ಲದಿದ್ದರೆ ಕರ್ತವ್ಯದಲ್ಲಿ ಅನೇಕ ತೊಂದರೆ ಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಸಮರ್ಪಕ ಕರ್ತವ್ಯ ನಿರ್ವಹಣೆಗಾಗಿ ಮಾನಸಿಕ ಆರೋಗ್ಯದ ಕಡೆಯೂ ಗಮನ ಕೊಡ ಬೇಕಿದೆ ಎಂದರು.
ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಕೆಲಸದ ಒತ್ತಡ ಸಹಜ. ಪೊಲೀಸರು ಮಾನಸಿಕವಾಗಿ ಯೂ ಸದೃಢವಾಗಿರುತ್ತಾರೆ. ನಿತ್ಯ ಅವರು ಒತ್ತಡದಲ್ಲಿ ಕಾರ‌್ಯನಿರ್ವಹಿಸುತ್ತಾರೆ. ಆದರೆ ಒತ್ತಡ ಇದೆ ಎಂದು ದುಶ್ಚಟಗಳಿಗೆ ಬಲಿಯಾಗ ಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡದೆ ಯೋಗ, ಧ್ಯಾನ, ಪ್ರಾಣಾಯಾಮ ಸೇರಿದಂತೆ ಉತ್ತಮ ಹವ್ಯಾಸ, ಉತ್ತಮ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದರು.
ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ ಮಾತನಾಡಿ, ನಮ್ಮ ಇತಿ-ಮಿತಿಯಲ್ಲಿ ನಡೆಸುವ ಜೀವನ ಮಾನಸಿಕ ನೆಮ್ಮದಿಗೆ ಕಾರಣವಾಗಲಿದೆ ಎಂದರು. ಉಪ ಪ್ರಧಾನ ಕಾನೂನು ಅಭಿರಕ್ಷಕ ಎಂ.ಮೂರ್ತಿ ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ-2017 ಕುರಿತು ಹಾಗೂ ಜಿಲ್ಲಾಸ್ಪತ್ರೆ ಮನೋವೈದ್ಯ ಡಾ.ಆರ್.ಮಂಜುನಾಥ್ ಕಾರ್ಯಕ್ಷೇತ್ರದಲ್ಲಿ ಮಾನಸಿಕ ಒತ್ತಡ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.
ಡಿವೈಎಸ್‌ಪಿಗಳಾದ ಎಸ್.ಎಸ್.ಗಣೇಶ್, ಪಿ.ಕೆ.ದಿನಕರ್, ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್‌ಕುಮಾರ್, ಕಾರ‌್ಯದರ್ಶಿ ಆ ರ್.ಗಂಗಾಧರ,ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್,ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್, ಜಿಲ್ಲಾ ಮಾನಸಿಕ ಕಾರ‌್ಯ ಕ್ರಮ ಆರೋಗ್ಯ ಅನುಷ್ಠಾನಾಧಿಕಾರಿ ಡಾ.ಜಿ.ಒ.ನಾಗರಾಜ್ ಮತ್ತಿತರರು ಇದ್ದರು.