ಪೊಲೀಸರಿಂದ ಏಕತಾ ನಡಿಗೆ

Nadige
Published on

ಚಿತ್ರದುರ್ಗ: ರಾಷ್ಟ್ರದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮಂಗಳವಾರ ರಾಷ್ಟ್ರೀಯ ಏಕತಾ ದಿನ ಆಚರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಅವರ ನೇತೃತ್ವದಲ್ಲಿ ಇಲಾಖೆ ಕಚೇರಿಯಿಂದ ಹೊರಟ ಏಕತಾ ನಡಿಗೆಯೂ ಮಹಾತ್ಮಗಾಂಧಿ ವೃತ್ತದವರೆಗೂ ಸಂಚರಿಸಿ, ಪೊಲೀಸ್ ಕವಾಯತು ಮೈದಾನ ತಲುಪಿತು. ಹೆಚ್ಚುವರಿ ಎಸ್‌ಪಿ ಕುಮಾರಸ್ವಾಮಿ ಸೇರಿ ನೂರಾರು ಪೊಲೀಸರು ಪಾಲ್ಗೊಂಡಿದ್ದರು.

ಪ್ರತಿಜ್ಞಾವಿಧಿ ಬೋಧನೆ: ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಭಾರತದ ಏಕೀಕರಣ ಕಾರ್ಯದಲ್ಲಿ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಶ್ರಮ, ಕಾರ್ಯವೈಖರಿ ಸ್ಮರಿಸಿದರು. ಅಧಿಕಾರಿಗಳು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net