ಪೊಲೀಸರಿಂದ ಪ್ಲಾಸ್ಟಿಕ್ ತ್ಯಾಜ್ಯ ತೆರವು

Published on

ಗುಂಡ್ಲುಪೇಟೆ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಟ್ಟಣದ ಬಂಡೀಪುರ ರಸ್ತೆಯ ಬದಿಯಲ್ಲಿ ಬಿಸಾಡಿದ್ದ ಪ್ಲಾಸ್ಟಿಕನ್ನು ಪೊಲೀಸರು ತೆರವುಗೊಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ನೇತೃತ್ವದಲ್ಲಿ ಸುಮಾರು 50 ಪೊಲೀಸ್ ಸಿಬ್ಬಂದಿ ಭಾನುವಾರ ಬೆಳಗ್ಗೆ ಪಟ್ಟಣದ ಊಟಿ ರಸ್ತೆಯಿಂದ ಹಂಗಳ ಗ್ರಾಮದವರೆಗೆ ರಸ್ತೆಯ ಬದಿಯಲ್ಲಿ ಬಿಸಾಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಡಿವೈಎಸ್‌ಪಿ ಲಕ್ಷ್ಮಯ್ಯ, ಸರ್ಕಲ್ ಇನ್ಸ್‌ಪೆಕ್ಟರ್ ಎನ್.ಜಯಕುಮಾರ್, ಸಬ್‌ಇನ್ಸ್‌ಪೆಕ್ಟರ್ ಸಾಹೇಬಗೌಡ, ಸಹಾಯಕ ಸಬ್ ಇನ್‌ಸ್ಪೆಕ್ಟರ್ ರೇವಣ್ಣಸ್ವಾಮಿ, ಎ.ಮಹೇಶ್, ಮಹೇಶ್, ಸಿಬ್ಬಂದಿ ನಟೇಶ್, ಜಯಕುಮಾರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net