ಪೊಲೀಸ್ ಅಧಿಕಾರಿ ಮೇಲೆ ಅತ್ಯಾಚಾರದ ಕೇಸ್ !

RAPE CASE LOGO
Published on

ಬೆಳಗಾವಿ: ನಗರ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಗುರುವಾರ ಅತ್ಯಾಚಾರದ ಪ್ರಕರಣ ದಾಖಲಾಗಿದೆ. ನಗರದಲ್ಲಿ ಪೊಲೀಸ್ ವೈರ್‌ಲೆಸ್ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಿಎಸ್‌ಐ ಲಾಲಸಾಬ್ ನಧಾಪ್ ಅವರ ವಿರುದ್ಧ ಮಹಿಳೆಯು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಲಾಲಸಾಬ್ ಅವರು ಮದುವೆಯಾಗುವುದಾಗಿ ನಂಬಿಸಿ, ನನ್ನನ್ನು ದೈಹಿಕವಾಗಿ ಬಳಸಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಿ, ಮಹಿಳೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net