ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ

24gok1-Web12
ಗೋಕಾಕದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಅಭಿನಂದಿಸಲಾಯಿತು. ನಗರಸಭೆ ಸದಸ್ಯೆ ಲಕ್ಷ್ಮೀ ದೇಶನೂರ ಇತರರು ಇದ್ದರು.
Published on

ಗೋಕಾಕ: ನಗರದ ಸೋಮವಾರ ಪೇಟೆಯಲ್ಲಿ ಶುಕ್ರವಾರ ಪೊಲೀಸ್ ಅಧಿಕಾರಿಗಳು, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪುಷ್ಪವೃಷ್ಟಿ ಮೂಲಕ ಅಭಿನಂದಿಸಲಾಯಿತು.

ಸೋಮವಾರ ಪೇಟೆ ನಗರಸಭೆ ಸದಸ್ಯೆ ಲಕ್ಷ್ಮೀ ದೇಶನೂರ ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪಥಸಂಚಲನ ನಡೆಯಿತು. ಡಿವೈಎಸ್‌ಪಿ ಪ್ರಭು ಡಿ.ಟಿ. ಮಾತನಾಡಿ, ಕರೊನಾ ವೈರಸ್ ತಡೆಯಲು ಸಾರ್ವಜನಿಕರು ಪೊಲೀಸ್, ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕು ಎಂದರು. ಪೌರಾಯುಕ್ತ ಶಿವಾನಂದ ಹಿರೇಮಠ, ಸಿಪಿಐ ಗೋಪಾಲ ರಾಠೋಡ, ಪಿಎಸ್‌ಐಗಳಾದ ಎ.ಟಿ.ಅಮ್ಮಿನಬಾಂವಿ, ನಾಗರಾಜ ಖಿಲಾರೆ, ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ, ಆನಂದ ಗೋಟಡಕಿ, ರೋಟರಿ ಅಧ್ಯಕ್ಷ ಸೋಮಶೇಖರ ಮಗದುಮ್ಮ, ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ, ಆರೋಗ್ಯ ಇಲಾಖೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net