ಪೊಲೀಸ್ ಠಾಣೆಯಲ್ಲಿ ಬೈಕ್ ಕದ್ದಿದ್ದ ಕಳ್ಳರ ಸೆರೆ..

IMG-20250210-WA0010
Published on

ಚಾಮರಾಜನಗರ: ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಬೈಕ್ ಕದ್ದಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ನಿವಾಸಿಗಳಾದ ಅರ್ಫಜ್ ಖಾನ್ (28),ಇಮ್ರಾನ್ (30) ಬಂಧಿತರು. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ದೃಶ್ಯಾವಳಿ ಆಧರಿಸಿ ಅರ್ಫಜ್ ಖಾನ್, ಇಮ್ರಾನ್ ಎಂದು ಗುರುತಿಸಿ ಸೆರೆ ಹಿಡಿಯಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆದಿದೆ. ಇಬರಿಬ್ಬರು ಈ ಹಿಂದೆಯೂ ಕಳ್ಳತನ ಪ್ರಕರಣಗಳಲ್ಲಿ ಭಾಗವಹಿಸಿದ್ದರು‌ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net