

ಮೈಸೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ನಗರದ ಪುರಭವನ ಆವರಣದ ಅಂಬೇಡ್ಕರ್ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಯಿತು.
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದು ಖಂಡನೀಯ. ಸರ್ಕಾರ ಪೊಲೀಸರ ಮೂಲಕ ಹೋರಾಟಗಾರರ ಧ್ವನಿ ಅಡಗಿಸುವ ಪ್ರಯತ್ನ ನಡೆಸುತ್ತಿದೆ ಎಂದು ದಸಂಸ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ದಸಂಸ ಮುಖಂಡರಾದ ಚೋರನಹಳ್ಳಿ ಶಿವಣ್ಣ, ಶಿವಮೂರ್ತಿ ಶಂಕರಪುರ, ಅಗಿನವಾಳು ಪ್ರಭು ರಫತ್ ಖಾನ್ ಹಾಗೂ ಇತರರು ಪಾಲ್ಗೊಂಡಿದ್ದರು.