ಪೊಲೀಸ್ ಮಕ್ಕಳ ಶಾಲೆಯಲ್ಲಿ ಸೂರ್ಯ ನಮಸ್ಕಾರ

4444
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ರಥಸಪ್ತಮಿ ಅಂಗವಾಗಿ ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅತಿಥಿಯಾಗಿದ್ದ ಪತಂಜಲಿ ಯೋಗ ಸಮಿತಿಯ ಕರ್ನಾಟಕ ಪ್ರಭಾರಿ ಭವರಲಾಲ್ ಆರ್ಯ ಅವರು ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು. ವಿದ್ಯಾರ್ಥಿಗಳು ಪ್ರತಿದಿನ ಸೂರ್ಯ ನಮಸ್ಕಾರ ಮÁಡಿ ದೈಹಿಕ ಮತ್ತು ಮÁನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ವಸತಿ ಶಾಲೆಯ ಪ್ರಾಚಾರ್ಯ ಡಾ. ವೈ.ಪಿ. ಕಲ್ಲನಗೌಡರ ಅಧ್ಯಕ್ಷತೆ ವಹಿಸಿದ್ದರು. ಪತಂಜಲಿ ಯೋಗ ಸಮಿತಿಯ ರಮೇಶ ಸುಲಾಖೆ, ಎಂ.ಡಿ. ಪಾಟೀಲ, ಶಿಕ್ಷಕರಾದ ಡಾ. ಎ.ಸಿ. ಅಲ್ಲಯ್ಯನವರಮಠ, ಡಾ. ಎಸ್.ಒ. ಬಿರಾದಾರ, ಜಯಶ್ರೀ ದನ್ನಪ್ಪನವರ, ಇತರರಿದ್ದರು. ಯೋಗ ಶಿಕ್ಷಕ ಡಾ. ಪ್ರಕಾಶ ಪವಾಡಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net