

ಚಿಕ್ಕಮಗಳೂರು: ವರ್ಷಪೂರ್ತಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿ ಸೇವೆ ಅವಿಸ್ಮರಣೀಯ. ವೈಯಕ್ತಿಕ ಬದುಕಿನ ಜೊತೆಗೆ ಸಮಾಜದ ಕೆಲಸದಲ್ಲಿ ತೊಡಗಿರುವುದು ಸಾಮಾನ್ಯದ ವಿಷಯವಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು.
ನಗರದ ರಾಮನಹಳ್ಳಿ ಪೊಲೀಸ್ ಕವಾಯಿತು ಮೈದಾನದಲ್ಲಿ ಬುಧವಾರ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ಧ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪೊಲೀಸ್ ವೃತ್ತಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಆತ್ಮಾಭಿಮಾನವಿದೆ. ತಮ್ಮ ತಂದೆಯು ಪೊಲೀಸ್ ವೃತ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ತಾವು ಪೊಲೀಸ್ ಕುಟುಂಬದವರೆAದು ಹೇಳಿಕೊಳ್ಳಲು ಹೆಚ್ಚಿನ ಖುಷಿಯಿದೆ. ನಿವೃತ್ತ ಪೊಲೀಸರ ಕುಂದುಕೊರತೆ ಆಲಿಸಿದಂತೆ, ವಿವಿಧ ಇಲಾಖೆಗಳಲ್ಲಿ ನಿವೃತ್ತಗೊಂಡವರಿಗೆ ಆಯಾ ಇಲಾಖೆ ಸ್ಪಂದಿಸಬೇಕು ಎಂದರು.
ದಿನವಿಡಿ ಕಾರ್ಯನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಅಶಾಂತಿ ಉಂಟಾಗದAತೆ ಎಚ್ಚರವಹಿಸುತ್ತಾರೆ. ಈ ಕಾರಣದಿಂದ ಜನಸಾಮಾನ್ಯರು ನೆಮ್ಮದಿಯಿಂದ ದೈನಂದಿನ ಕೆಲಸ-ಕಾರ್ಯಗಳಿಗೆ ತೆರಳಲು ಸಾಧ್ಯವಾಗಿದೆ. ಜೊತೆಗೆ ಸಾರ್ವಜನಿಕರು ಪೊಲೀಸರೊಂದಿಗೆ ಉತ್ತಮ ಒಡನಾಟ ಹೊಂದಬೇಕು ಎಂದು ತಿಳಿಸಿದರು.
ನಿವೃತ್ತ ಸರ್ಕಲ್ ಇನ್ಸ್ಪೆಕ್ಟರ್ ಕೆ.ಸತ್ಯನಾರಾಯಣ್ ಮಾತನಾಡಿ, ಯಾವುದೇ ವೃತ್ತಿಯಲ್ಲಿ ಪ್ರೀತಿ, ಗೌರವದಿಂದ ಕೆಲಸ ಮಾಡಿದರೆ ತಾನಾಗಿಯೇ ವಿಶ್ವಾಸದ ಪ್ರಶಸ್ತಿಗಳು ಸಿಗಲಿದೆ. ಆ ನಿಟ್ಟಿನಲ್ಲಿ ತಾವು ಕಾರ್ಯನಿರ್ವಹಿಸಿದ ಪೊಲೀಸ್ ಇಲಾಖೆಯಲ್ಲಿ ಹಲವಾರು ಪ್ರೀತಿಯ ಸಂಪತ್ತನ್ನು ಗಳಿಸಿಕೊಂಡು ನಿವೃತ್ತಿ ಹೊಂದಿz್ದೆÃನೆ ಎಂದು ಹೇಳಿದರು.
ಪ್ರಸ್ತುತ ಇಲಾಖೆಗಳಲ್ಲಿ ಯುವ ಪೊಲೀಸರಿಗೆ ಅನುಭವದ ಕೊರತೆ ಸಾಮಾನ್ಯ. ಹೀಗಾಗಿ ವರಿಷ್ಟಾಧಿಕಾರಿಗಳು ನಿವೃತ್ತಗೊಂಡ ಅಧಿಕಾರಿಗಳಿಂದ ಯುವ ಪೊಲೀಸರಿಗೆ ಕೋಚಿಂಗ್‌ಗೆ ಅವಕಾಶ ಕಲ್ಪಿಸಿಕೊಟ್ಟಲ್ಲಿ ಬಹಳಷ್ಟು ಉಪಯೋಗವಾಗಲಿದೆ. ಜೊತೆಗೆ ಅನುಭವದ ಕೊರತೆಯನ್ನು ನೀಗಿಸಲು ಸಾಧ್ಯ ಎಂದು ತಿಳಿಸಿದರು.
ಇದೀಗ ನಿವೃತ್ತಗೊಂಡ ತಾವು ಕಡೂರು ಪೊಲೀಸ್ ಸಿಬ್ಬಂದಿಗಳಿಗೆ ಕೋಚಿಂಗ್‌ಗೆ ಅವಕಾಶ ಸಿಕ್ಕಿರುವುದು ಸಂತೋಷವಾಗಿದೆ. ಹಾಗೆಯೇ ಇಲಾಖೆಗಳಲ್ಲಿ ನಿವೃತ್ತಿಗೊಂಡ ಹಲವಾರಲ್ಲಿ ಅನುಭವದ ಶಕ್ತಿಯಿದೆ. ಹೀಗಾಗಿ ವರಿಷ್ಟಾಧಿಕಾರಿಗಳು ಯುವ ಪೊಲೀಸರಿಗೆ ಕೋಚಿಂಗ್ ನೀಡಲು ನಿವೃತ್ತರನ್ನು ಬಳಸಿಕೊಂಡರೆ ಸಮಗ್ರ ತರಬೇತಿ ಕೊಟ್ಟು ಅಣಿಗೊಳಿಸಬಹುದು ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ವಿಕ್ರಮ್ ಅಮಟೆ ವರದಿ ಮಂಡಿಸಿ ಮಾತನಾಡಿ, ಸಮಾಜಕ್ಕಾಗಿ ದುಡಿಯುತ್ತಿರುವ ಪೊಲೀಸರಿಗೆ ಉಚಿತ ವೈದ್ಯಕೀಯ ಸೌಲಭ್ಯ, ಕಣ್ಣಿನ ತಪಾಸಣೆ ಹಾಗೂ ಪೊಲೀಸ್ ಸಿಬ್ಬಂದಿಗಳ ಮಕ್ಕಳು ಅತಿಹೆಚ್ಚು ಅಂಕಗಳಿಸಿದವರಿಗೆ ವಿದ್ಯಾರ್ಥಿ ವೇತನ ಸೌಕರ್ಯವನ್ನು ಕಲ್ಪಿಸಿ ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಪೊಲೀಸ್ ಸಿಬ್ಬಂದಿಗಳಿAದ ಪಥಸಂಚಲನ ನಡೆಯಿತು. ಧ್ವಜ ದಿನಾಚರಣೆ ಪ್ರಯುಕ್ತ ವೇದಿಕೆ ಮೇಲೆ ಅಧಿಕಾರಿಗಳು ಧ್ವಜದ ಬಿಲ್ಲೆ ಬಿಡುಗಡೆಗೊಳಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ.ಜಯಕು ಮಾರ್ ಇದ್ದರು.