

ರಾಯಬಾಗ: ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಯಲು ಪೋಕ್ಸೋ ಕಾಯ್ದೆ ಜಾರಿಗೆ ತಂದಿದ್ದು, ಎಲ್ಲರೂ ತಿಳಿದುಕೊಳ್ಳಬೇಕು ಎಂದು ಹಿರಿಯ ದಿವಾಣಿ ನ್ಯಾಯಾೀಶ ಬಸವರಾಜಪ್ಪ ಕೆ.ಎಂ. ಹೇಳಿದರು.
ಪಟ್ಟಣದ ಮಹಾವೀರ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಮಹಾವೀರ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೋಕ್ಸೋ ಕಾಯ್ದೆ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಮಕ್ಕಳ ಕಾನೂನುಗಳ ಬಗ್ಗೆ ಪಾಲಕರು ಮತ್ತು ಶಿಕ್ಷಕರು ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಪ್ರಾಚಾರ್ಯ ಮಾಧುರಿ ಜಾಧವ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ದಿವಾಣಿ ನ್ಯಾಯಾೀಶ ಅಲೋಕ ಎ.ಎನ್., ಹೆಚ್ಚುವರಿ ದಿವಾಣಿ ನ್ಯಾಯಾೀಶ ಮಂಜುನಾಥ ಪಾನಘಂಟಿ, ಬಿಇಒ ಪ್ರಭಾವತಿ ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಆರ್.ಎಚ್.ಗೊಂಡೆ, ಉಪಾಧ್ಯಕ್ಷ ಎಂ.ಎಂ. ಚಿಂಚಲಿಕರ, ಕಾರ್ಯದರ್ಶಿ ಆರ್.ಎಸ್.ಹೊಳೆಪ್ಪಗೋಳ ಇತರರಿದ್ದರು.