

ಚಿಕ್ಕಮಗಳೂರು: ಕುಟುಂಬದಲ್ಲಾಗುವ ತಂದೆ ತಾಯಿ ನಡುವಿನ ಜಗಳಗಳು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಉತ್ತಮ ವಾತಾವರಣದಲ್ಲಿ ಬೆಳೆಸಿ ಅವರ ಸುಗಮ ಜೀವನಕ್ಕಾಗಿ ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್.ಕೀರ್ತನಾ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ತಾಲೂಕು ಪಂಚಾಯಿತಿ ಡಾ. ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಿದ್ದ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಅನುಷ್ಠಾನದಲ್ಲಿ ಭಾಗಿದಾರ ಇಲಾಖೆಗಳ ಪಾತ್ರ ಕುರಿತು ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಯೊಂದು ಮಗುವು ದೇಶದ ಭವಿಷ್ಯವಾಗಿದೆ. ಅವರನ್ನು ಸ್ವಾಸ್ಥö್ಯ ಪರಿಸರದಲ್ಲಿ ಬೆಳೆಸಿ ಸಾಮಾಜದ ಉತ್ತಮ ಪ್ರಜೆಗಳಾಗಿ ರೂಪಿಸುವುದು ನಮ್ಮೆಲ್ಲರ ಕರ್ತವ್ಯ. ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಅವರ ಅಗತ್ಯತೆಗಳಿಗೆ ಕೊರತೆಯಾಗದಂತೆ ನಿಗಾವಹಿಸಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಮಕ್ಕಳ ಮುಂದೆ ಪೋಷಕರು ಹಾಗೂ ಇತರೆ ವ್ಯಕ್ತಿ ಅಸಭ್ಯವಾಗಿ ವರ್ತಿಸದಂತೆ ಎಚ್ಚರ ವಹಿಸಬೇಕು. ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ರೀತಿಯ ದೌರ್ಜನ್ಯಗಳು ಜರುಗದಂತೆ ಪ್ರತಿ ಕುಟುಂಬಗಳಿಗೆ ಮಾಹಿತಿಯನ್ನು ತಲುಪಿಸುವಲ್ಲಿ ತರಬೇತುದಾರರು ಕ್ರಮವಹಿಸಬೇಕು. ಮಕ್ಕಳ ರಕ್ಷಣೆಗಾಗಿ ಇರುವ ಕಾನೂನು ಕ್ರಮಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಹನುಮಂತಪ್ಪ ವಿ. ಕಾರ್ಯಗಾರ ಉದ್ಘಾಟಿಸಿ ಮಾತನಾಡಿ, ದೌರ್ಜನ್ಯದಿಂದ ಮಹಿಳೆಯರನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ದೌರ್ಜನ್ಯಕ್ಕೊಳಗಾದ ಮಹಿಳೆಯರು ಮಹಿಳಾ ಸಹಾಯವಾಣಿ-೧೮೧ನ್ನು ಬಳಸಿಕೊಳ್ಳುವಂತೆ ಹಾಗೂ ಪರಿಹಾರ, ಜೀವನಾಂಶವನ್ನು ಪಡೆದುಕೊಳ್ಳಬಹುದಾದ ರೀತಿ ಹಾಗೂ ರಕ್ಷಣೆಗೆ ಇರುವ ಕಾಯ್ದೆ ಕಾನೂನುಗಳ ಬಗ್ಗೆ ಅವರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಭಜಂತ್ರಿ ಕಾರ್ಯಾಗಾರ ಉz್ದೆÃಶಿಸಿ ಮಾತನಾಡಿ, ಮಹಿಳೆಯರ ಮೇಲೆ ಆಗುತ್ತಿರುವ ಕೌಟುಂಬಿಕ ದೌರ್ಜನ್ಯದಿಂದ ಸಮಾಜದಲ್ಲಿ ದುಷ್ಪರಿಣಾಮಗಳು ಬೀರುತ್ತವೆ ಮತ್ತು ವರದಕ್ಷಿಣೆ ಕಿರುಕುಳ ತಡೆಯುವುದು ಹಾಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವಂತಹ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟುವುದಕ್ಕಾಗಿ ಯಾವುದೇ ಸರ್ಕಾರಿ ಅಥವಾ ಖಾಸಗಿ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೧೦ಕ್ಕಿಂತ ಹೆಚ್ಚಿನ ಸಿಬ್ಬಂದಿಗಳು ಇದ್ದಲ್ಲಿ ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸುವಂತೆ ತಿಳಿಸಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಡಾ. ಪವಿತ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಂತೋಷ, ಚಿಕ್ಕಮಗಳೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್, ವಕೀಲರಾದ ಮಮತ ಮತ್ತು ಅರುಂಧತಿ ಮತ್ತಿತರರಿದ್ದರು.