ಪೋಷಕರಿಗೆ ಮತದಾನ ಮಾಡುವಂತೆ ವಿದ್ಯಾರ್ಥಿಗಳಿಗೆ ಜಾಗೃತಿ

ಪೋಷಕರಿಗೆ ಮತದಾನ ಮಾಡುವಂತೆ ವಿದ್ಯಾರ್ಥಿಗಳಿಗೆ ಜಾಗೃತಿ
Published on

ಹಾಸನ: ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ನೆರೆಹೊರೆಯವರಿಗೆ, ಪೋಷಕರಿಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಬೇಕು ಎಂದು ಹಾಸನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಹೇಳಿದರು.
ನಗರದ ದಾಸರಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ತಾಲೂಕು ಪಂಚಾಯಿತಿ ಮತ್ತು ಹಾಸನ ತಾಲೂಕು ಮಟ್ಟದ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಶಾಲಾ ಮಕ್ಕಳಿಂದ ತಮ್ಮ ಪೋಷಕರಿಗೆ ಅಂಚೆ ಚೀಟಿಯನ್ನು ಬರೆಸುವುದರ ಮೂಲಕ ಪೋಷಕರುಗಳು ಕಡ್ಡಾಯವಾಗಿ ಮತದಾನ ಮಾಡುವಂತೆ ವಿಶೇಷವಾಗಿ ಜಾಗೃತಿ ಮೂಡಿಸಲಾಯಿತು.
ಇದೇ ವೇಳೆ ನಗರಸಭೆ ಆಯುಕ್ತ ಯೋಗಾನಂದ, ತಾಲೂಕು ಶಿಕ್ಷಣಾಧಿಕಾರಿ ಮಂಜುಳಾ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಿ.ಬಿ.ದಿನೇಶ್ , ತಾಲೂಕು ಯೋಜನಾಧಿಕಾರಿ ವಿನಾಯಕ ಅಗಸಿ, ದಾಸರಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಕೆ.ಎಲ್.ಮಂಜುನಾಥ್ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net