

ಮಾಂಜರಿ: ಅಧಿಕ ಇಳುವರಿಗಾಗಿ ಹೆಚ್ಚು ರಾಸಾಯನಿಕ ಗೊಬ್ಬರ, ನೀರು ಬಳಕೆ ಮಾಡುತ್ತಿರುವುದರಿಂದ ಭೂಮಿ ಫಲವತ್ತತೆ ಕಳೆದುಕೊಂಡು ಸವಳು-ಜವಳು ಆಗುತ್ತಿದೆ. ಹಾಗಾಗಿ ಸಮಗ್ರ ಪೋಷಕಾಂಶಗಳ ನಿರ್ವಹಣೆಗೆ ರೈತರು ಒತ್ತು ನೀಡಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಎಚ್.ಡಿ.ಕೊಳೇಕರ ಹೇಳಿದರು.
ಸಮೀಪದ ಅಂಕಲಿ ಗ್ರಾಮದಲ್ಲಿ ಡಾ. ಪ್ರಭಾಕರ ಕೋರೆ ಅವರ ೭೮ನೇ ಜನ್ಮದಿನದ ಅಂಗವಾಗಿ ಡಾ.ಪ್ರಭಾಕರ ಕೋರೆ ಜನ್ಮದಿನ ನಿಮಿತ್ತ ಶಿವಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ `ಕಬ್ಬು ಇಳುವರಿ ಹೆಚ್ಚಿಸಲು ಕೃತಕ ಬುದ್ಧಿಮತ್ತೆ' ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಬಾರಾಮತಿ ಕೃಷಿ ವಿಜ್ಞಾನ ಕೇಂದ್ರದ ತುಷಾರ ಜಾಧವ ಮಾತನಾಡಿದರು. ಕೃಷಿಯಲ್ಲಿ ಡ್ರೋಣ ಬಳಕೆ ಕುರಿತು ಪ್ರಾತ್ಯಕ್ಷಿಕೆ ಮಾಡಲಾಯಿತು.
ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ, ಜನ್ಮದಿನ ಆಚರಣೆ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ, ಭರತೇಶ ಬನವಣೆ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ತಾತ್ಯಾಸಾಹೇಬ ಕಾಟೆ, ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಚೌರಡ್ಡಿ, ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾದ ಅಜಿತ್‌ರಾವ ದೇಸಾಯಿ, ಅಣ್ಣಾಸಾಹೇಬ ಇಂಗಳೆ, ಮಲ್ಲಪ್ಪ ಮೈಶಾಳೆ, ಚೇತನ ಪಾಟೀಲ, ಸಂದೀಪ ಪಾಟೀಲ, ಮಹಾವೀರ ಮಿರ್ಜಿ, ಮಹಾವೀರ ಕಾತ್ರಾಳೆ, ಭರಮಗೌಡ ಪಾಟೀಲ, ಪ್ರಭಾಕರ ಕೋರೆ ಸೊಸೈಟಿ ಅಧ್ಯಕ್ಷ ಮಹಾಂತೇಶ ಪಾಟೀಲ, ಉಪಾಧ್ಯಕ್ಷ ಶಿದಗೌಡ ಮಗದುಮ್, ವ್ಯವಸ್ಥಾಪಕ ನಿರ್ದೇಶಕರಾದ ದೇವೇಂದ್ರ ಕರೋಶಿ, ನಿರ್ದೇಶಕರಾದ ಅಣ್ಣಾಸಾಹೇಬ ಸಂಕೇಶ್ವರಿ, ಅಶೋಕ ಚೌಗಲಾ, ಅನಿಲ ಪಾಟೀಲ, ಪಿಂಟು ಹಿರೇಕುರುಬರ, ಎನ್.ಎಸ್. ಹಿರೇಮಠ, ದೇವೇಂದ್ರ ಕರೋಶಿ ಇತರರಿದ್ದರು.