ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಾಳೆ

Published on

ಹಾವೇರಿ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಎಂ.ಎಸ್. ಕಾಯ್ದೆ 2013 ಅನ್ವಯ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾ.26ರಂದು ಬೆಳಗ್ಗೆ 11 ಗಂಟೆಗೆ ನಗರದ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯ ಎಲ್ಲ ಪ್ರತಿನಿಧಿಗಳು, ಪೌರಾಢಳಿತ ಸಂಸ್ಥೆಗಳ ಪೌರ ಕಾರ್ಮಿಕರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಸಫಾಯಿ ಕರ್ಮಚಾರಿಗಳ ಜಿಲ್ಲಾ, ಉಪ ವಿಭಾಗ ಮಟ್ಟದ ಜಾಗೃತ ಸಮಿತಿ ಸದಸ್ಯರು, ಉಪ ವಿಭಾಗ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ನಾಮ ನಿರ್ದೇಶಿತ ಸದಸ್ಯರು, ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಸದಸ್ಯರು ಹಾಗೂ ಎಲ್ಲ ಸಫಾಯಿ ಕರ್ಮಚಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮ ಮನವಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net