ಪೌರ ಕಾರ್ಮಿಕರ ಮಕ್ಕಳು ಐಎಎಸ್, ಐಪಿಎಸ್ ಹುದ್ದೆಗೇರಬೇಕು: ಬಿ.ವೈ.ರಾಘವೇಂದ್ರ

WEBBBB SKPPPP
Published on

ಶಿಕಾರಿಪುರ: ಪೌರ ಕಾರ್ಮಿಕರ ಸೇವೆ ಅನುಪಮ. ಅವರ ಸೇವೆಯ ಪರಿಣಾಮದಿಂದ ಇಂದು ನಾವು ಸ್ವಚ್ಛ, ಸುಂದರ ಶಿಕಾರಿಪುರ ನೋಡಲು ಸಾಧ್ಯವಾಗಿದೆ. ಈ ದಿನ ಅವರ ನಿಸ್ವಾರ್ಥ ಸೇವೆಗೆ ಸಮರ್ಪಣೆ ಆಗಲಿ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಪುರಸಭೆ ಸಭಾ ಭವನದಲ್ಲಿ ಶುಕ್ರವಾರ ಆಯೋಹಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ನೇರಪಾವತಿ ಪೌರಕಾರ್ಮಿಕರನ್ನು ಕಾಯಂ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದರಿಂದ ಶಿಕಾರಿಪುರ ಪುರಸಭೆಯಲ್ಲಿ 23 ಹಾಗೂ ಶಿರಾಳಕೊಪ್ಪದಲ್ಲಿ 20 ಕಾರ್ಮಿಕರು ಕಾಯಂಗೊಂಡಿದ್ದಾರೆ ಎಂದರು.

ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು. ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ನಿಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ. ಸರ್ಕಾರ ಹಿಂದುಳಿದ ವರ್ಗಗಳ ಮಕ್ಕಳಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ನಿಮ್ಮಿಂದ ನಿಮ್ಮ ಮಕ್ಕಳು ಐಎಎಸ್, ಐಪಿಎಸ್‌ನಂತಹ ಹುದ್ದೆಗಳನ್ನು ಅಲಂಕರಿಸಬೇಕು. ಆಗ ನಿಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net