

ಚಿಕ್ಕಮಗಳೂರು: ನಗರದ ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿದಿನ ಸ್ವಚ್ಛತೆ ಕಾಯಕ ಮಾಡುವ ಪೌರ ಕಾರ್ಮಿಕರು ಮತ್ತು ಪೌರ ನೌಕರರ ಆರೋಗ್ಯ ಕಾಪಾಡಲು ರಾಜ್ಯಸರ್ಕಾರ ಕ್ರೀಡಾಕೂಟ ಆಯೋಜನೆ ಮಾಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.
ನಗರದ ಜಿಲ್ಲಾ ಆಟದ ಮೈದಾನದಲ್ಲಿ ಬುಧವಾರ ನಗರಸಭೆ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಆಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೌರ ಕಾರ್ಮಿಕರು ತಮ್ಮ ಕುಟುಂಬವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಇದೇ ಉz್ದೆÃಶದಿಂದ ಸರ್ಕಾರ ಪೌರ ಕಾರ್ಮಿಕರಿಗೆ ಗ್ಲೌಸ್, ಶೂ, ಸಮವಸ್ತç ಮುಂತಾದ ಹಲವಾರು ಸೌಲಭ್ಯ ಕಲ್ಪಿಸಿದೆ. ಜೊತೆಗೆ ವಿಮಾ ಸೌಲಭ್ಯವನ್ನು ನೀಡಲಾಗಿದೆ ಎಂದರು.
ವಾರ್ಷಿಕವಾಗಿ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತಿದೆ. ನಾವು ಆರೋಗ್ಯವಾಗಿz್ದÉÃವೆ ಎಂದುಕೊAಡು ಪೌರ ಕಾರ್ಮಿಕರು ಈ ಶಿಬಿರಗಳಿಗೆ ಯಾವುದೇ ಕಾರಣಕ್ಕೂ ಗೈರಾಗಬಾರದು. ಸ್ವಾರ್ಥವಿಲ್ಲದೆ ನಿಸ್ವಾರ್ಥವಾಗಿ ಬದುಕುವ ಸಂದರ್ಭದಲ್ಲಿ ತಮ್ಮ ಕುಟುಂಬಕ್ಕಾಗಿ ಪೌರ ಕಾರ್ಮಿಕರು ತಮ್ಮ ಆರೋಗ್ಯ ಚನ್ನಾಗಿ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ರೀಡಾಕೂಟ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಮಾತನಾಡಿ, ಪೌರಕಾರ್ಮಿಕರು ಪ್ರತಿನಿತ್ಯ ಸ್ವಚ್ಛತೆ ಮಾಡಿ ನಗರದ ನಾಗರಿಕರ ಆರೋಗ್ಯಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ನೀವು ಆರೋಗ್ಯವಾಗಿದ್ದಾಗ ಮಾತ್ರವೇ ಇಡೀ ನಗರ ಆರೋಗ್ಯವಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರ ಆರೋಗ್ಯ ಕಾಪಾಡಲು ಸ್ಥಳೀಯ ಆಡಳಿತಗಳು ಕ್ರಮ ಕೈಗೊಳ್ಳಬೇಕು ಎಂದರು.
ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಅವರ ಕುಟುಂಬದವರಿಗಾಗಿ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮಗಳನ್ನು ಆಯೋಜಿಸಿ ಕುಟುಂಬದವರ ಅಭಿರುಚಿಗೆ ತಕ್ಕಂತೆ ಕಾರ್ಯಕ್ರಮ ನಡೆಸಬೇಕು ಎಂದು ಹೇಳಿದರು.
ಇನ್ನು ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ರಾಜ್ಯಸರ್ಕಾರ ಶೀಘ್ರವೇ ಖಾಯಂಗೊಳಿಸಬೇಕು ಹಾಗೂ ನಿವೃತ್ತಿ ವೇತನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಅಧ್ಯಕ್ಷತೆ ವಹಿಸಿದ್ದ ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಸದೃಢ ಆರೋಗ್ಯಕ್ಕಾಗಿ ಪೌರ ಕಾರ್ಮಿಕರು ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯ ಎಂದು ಹೇಳಿದರು.
ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ಪೌರಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕಳೆದ ೪ ವರ್ಷಗಳಿಂದ ಗುಂಪು ವಿಮೆಯನ್ನು ಮಾಡಿಸಿz್ದÉÃವೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪೌರಕಾರ್ಮಿಕರ ಅರೋಗ್ಯ ತಪಾಸಣೆ ನಡೆಸಿ ಅವರ ಆರೋಗ್ಯಕ್ಕಾಗಿ ಶೂ, ಗ್ಲೌಸ್, ಸಮವಸ್ತç ಮುಂತಾದ ಸೌಲಭ್ಯಗಳನ್ನು ನೀಡಿz್ದÉÃವೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾನಾಯ್ಕ್, ಸದಸ್ಯರಾದ ವರಸಿದ್ಧಿ ವೇಣುಗೋಪಾಲ್, ಗುರುಮಲ್ಲಪ್ಪ, ಗೋಪಿ, ರೂಪ ಕುಮಾರ್, ಜಾವಿದ್, ಎ.ಸಿ.ಕುಮಾರಗೌಡ, ಅಣ್ಣಯ್ಯ, ಶ್ರೀನಿವಾಸ್, ದಿನೇಶ್, ಪ್ರಕಾಶ್ ರೈ, ಉಪ ವಿಭಾಗಾಧಿಕಾರಿ ಸುದರ್ಶನ್, ಮ್ಯಾನೇಜರ್ ರವಿ, ಆರೋಗ್ಯ ನಿರೀಕ್ಷಕರಾದ ವೆಂಕಟೇಶ್, ಈಶ್ವರ್, ನಾಗಪ್ಪ, ರಂಗಪ್ಪ, ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.